Home
ಸುದ್ದಿಜಾಲ

ದೇಶಿ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ಪ್ರಿಮಿಯಂ ಸ್ಮಾರ್ಟ್‌ಫೋನ್‌ಗಳ ಸಾಲಿನಲ್ಲಿ ಮುಂಚೂನಿಯಲ್ಲಿರುವ ಒನ್‌ಪ್ಲಸ್‌ ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಮಕರ ಸಂಕ್ರಾಂತಿಯ ಸಡಗರದ ಸಮಯದಲ್ಲಿ ಹೊಸ ಒನ್‌ಪ್ಲಸ್‌ 9RT ಫೋನ್‌ ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಭಾರತದಲ್ಲಿ ಹೊಸ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹ್ಯಾಕರ್ ಬ್ಲಾಕ್ ಮತ್ತು ನ್ಯಾನೋ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಜನವರಿ 17 ರಂದು ಅಮೆಜಾನ್‌ ಗ್ರೇಟ್‌ ಇಂಡಿಯನ್‌ ರಿಪಬ್ಲಿಕ್‌ ಡೇ ಸೇಲ್‌ನಲ್ಲಿ ಮಧ್ಯಾಹ್ನ 12 ಗಂಟೆಯ ನಂತರ ಮಾರಾಟವಾಗಲಿದೆ. ಹಾಗಾದ್ರೆ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ಯಾಮ್‌ಸಂಗ್‌ E4 ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 1,300Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಹೊಂದಿದೆ. ಇದು 100% DCI:P3 ಬಣ್ಣದ ಹರವು ಕವರೇಜ್‌ನೊಂದಿಗೆ ಬರುತ್ತದೆ. ಇನ್ನು ಈ ಡಿಸ್‌ಪ್ಲೇ HDR10+ ಬೆಂಬಲದೊಂದಿಗೆ ಬರುತ್ತದೆ. ಅಲ್ಲದೆ sRGB ಮತ್ತು DCI:P3 ಕಲರ್‌ ವಿಧಾನಗಳನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಕ್ಸಿಜನ್‌OS 11 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ನೊಂದಿಗೆ ಬರುತ್ತದೆ ಮತ್ತು 60fps ನಲ್ಲಿ 4K ನಲ್ಲಿ ವೀಡಿಯೊವನ್ನು ರೆಕಾರ್ಡ್ ಮಾಡಬಹುದು. ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ ಕಂಪನಿಯ ವಾರ್ಪ್ ಚಾರ್ಜ್ 65T ತಂತ್ರಜ್ಞಾನದ ಬಳಸಿ 65W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಮತ್ತು ಬ್ಲೂಟೂತ್ v5.2 ಸಂಪರ್ಕವನ್ನು ನೀಡುತ್ತದೆ. ಜೊತೆಗೆ GPS/ A-GPS ಮತ್ತು NFC ಬೆಂಬಲವನ್ನು ನೀಡುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೇಸ್ ಮಾಡೆಲ್‌ 8GB + 128GB ಸ್ಟೋರೇಜ್ ಮಾದರಿಗೆ 42,999ರೂ. ಹಾಗೂ 12GB +256GB ಸ್ಟೋರೇಜ್ ರೂಪಾಂತರಕ್ಕಾಗಿ 46,999.ರೂ ಬೆಲೆಯನ್ನು ಹೊಂದಿದೆ. ಈ ಫೋನ್‌ ಹ್ಯಾಕರ್ ಬ್ಲಾಕ್ ಮತ್ತು ನ್ಯಾನೋ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಗ್ರೇಟ್ ಇಂಡಿಯನ್ ರಿಪಬ್ಲಿಕ್ ಡೇ ಸೇಲ್‌ ಜನವರಿ 17 ರಂದು ಮಧ್ಯಾಹ್ನ 12 ಗಂಟೆಯಿಂದ ಮಾರಾಟವಾಗಲಿದೆ.

Best Mobiles in India

English summary
OnePlus 9RT is equipped with a Qualcomm Snapdragon 888 SoC under the hood.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+