Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸಿದ ಒನ್‌ಪ್ಲಸ್‌ ಏಸ್ 2 ಪ್ರೊ!

ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಬಿಗ್‌ ಕ್ರೇಜ್‌ ಇದೆ. ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಟೆಕ್‌ ವಲಯದಲ್ಲಿ ಹಾಟ್‌ಫೇವರಿಟ್‌ ಎನಿಸಿಕೊಂಡಿದೆ. ಅದರಂತೆ ಮುಂದುವರೆದ ಭಾಗವಾಗಿ ಹೊಸ ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ.

ಹೌದು, ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಮಾರುಕಟ್ಟೆಗೆ ಎಂಟ್ರಿ ನೀಡಿ ಧೂಳೆಬ್ಬಿಸುವ ಸೂಚನೆ ನೀಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಮಾಡ್ಯೂಲ್‌ನ ವಿನ್ಯಾಸ ಹಾಗೂ ಫೀಚರ್ಸ್‌ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಹಾಗಾದ್ರೆ ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸಿದ ಒನ್‌ಪ್ಲಸ್‌ ಏಸ್ 2 ಪ್ರೊ!

ಒನ್‌ಪ್ಲಸ್‌ ಏಸ್ 2 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1240 x 2772 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 453 ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ ಮಲ್ಟಿ-ಟಚ್ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌ ಏಸ್ 2 ಪ್ರೊ ಪ್ರೊಸೆಸರ್‌ ನಿರೀಕ್ಷೆ?
ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಹಾಗೆಯೇ 16GB RAM ಮತ್ತು 512 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ನಿರೀಕ್ಷಿಸಲಾಗಿದೆ.

ಒನ್‌ಪ್ಲಸ್‌ ಏಸ್ 2 ಪ್ರೊ ಕ್ಯಾಮೆರಾ ಸೆಟ್‌ಅಪ್‌
ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿರಲಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಒನ್‌ಪ್ಲಸ್‌ ಏಸ್ 2 ಪ್ರೊ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 100W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂಥ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿರಲಿದೆ.

ಒನ್‌ಪ್ಲಸ್‌ ಏಸ್ 2 ಪ್ರೊ ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್‌ ಏಸ್ 2 ಪ್ರೊ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಲಭ್ಯತೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗೋದು ಪಕ್ಕಾ ಆಗಿದೆ. ನಂತರದ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಕೂಡ ಬಿಡುಗಡೆಯಾಗುವ ನಿರೀಕ್ಷೆ ಇಡಲಾಗಿದೆ.

ಇನ್ನು ಒನ್‌ಪ್ಲಸ್‌ ಇತ್ತೀಚಿಗೆ ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್ ನಂತಹ ಕೆಲವು ವೈಶಿಷ್ಟ್ಯಗಳನ್ನು ಪಡೆದಿದೆ.

Best Mobiles in India

English summary
OnePlus Ace 2 Pro smartphone Design Renders Leaked
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+