Home
ಸುದ್ದಿಜಾಲ

ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌; ಫೀಚರ್ಸ್‌ ಹೇಗಿದೆ?

ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ಭಾರಿ ಡಿಮ್ಯಾಂಡ್‌ ಇದೆ. ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಇದೀಗ ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಯುವಕರು ಮತ್ತು ಗೇಮರುಗಳನ್ನು ಗುರಿಯಾಗಿಸಿಕೊಂಡು ವಿನ್ಯಾಸಗೊಳಿಸಲಾಗಿದೆ.

ಹೌದು, ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗ್ರ್ಯಾಂಡ್‌ ಎಂಟ್ರಿ ಕೊಟ್ಟ ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ ಏಸ್‌ 2 ಪ್ರೊ ಡಿಸ್‌ಪ್ಲೇ ರಚನೆ
ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಕರ್ವ್ಡ್‌ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 450 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 2160Hz PWM ಡಿಮ್ಮಿಂಗ್‌ ಅನ್ನು ಒಳಗೊಂಡಿದೆ. ಜೊತೆಗೆ 1600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಒನ್‌ಪ್ಲಸ್‌ ಏಸ್‌ 2 ಪ್ರೊ ಪ್ರೊಸೆಸರ್‌
ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ ಏಸ್‌ 2 ಪ್ರೊ ಕ್ಯಾಮೆರಾ ಸೆಟ್‌ಅಪ್‌
ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಸ್ನ್ಯಾಪರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ ಏಸ್‌ 2 ಪ್ರೊ ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 150W SuperVOOC ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಅಯ್ಕೆಗಳಲ್ಲಿ ಡ್ಯುಯಲ್ ಸಿಮ್, 5 ಜಿ, ವೈಫೈ 7, ಬ್ಲೂಟೂತ್ 5.3, ಜಿಎನ್‌ಎಸ್‌ಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸುತ್ತದೆ. ಇತರ ವೈಶಿಷ್ಟ್ಯಗಳಲ್ಲಿ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸಂವೇದಕ, ಡಾಲ್ಬಿ ಅಟ್ಮಾಸ್-ಬೆಂಬಲಿತ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಐಆರ್ ಬ್ಲಾಸ್ಟರ್ ಮತ್ತು ಒನ್‌ಪ್ಲಸ್ 11 ರಿಂದ ಕಸ್ಟಮೈಸ್ ಮಾಡಿದ ಎಕ್ಸ್-ಆಕ್ಸಿಸ್ ಕಂಪನ ಮೋಟಾರ್ ಸೇರಿವೆ.

ಒನ್‌ಪ್ಲಸ್‌ ಏಸ್‌ 2 ಪ್ರೊ ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್‌ ಏಸ್‌ 2 ಪ್ರೊ ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್‌ ಮಾಡೆಲ್‌ 12GB + 256GB ಆಯ್ಕೆಯ ಬೆಲೆ ¥2,999 (ಅಂದಾಜು 34,608ರೂ) ಹೊಂದಿದೆ. ಇದರ 16GB + 512GB ಆಯ್ಕೆಯ ಬೆಲೆ ¥3,399 (ಅಂದಾಜು 39,227ರೂ) ಆಗಿದೆ. ಈ ಸ್ಮಾರ್ಟ್‌ಫೋನ್‌ ಇಂದಿನಿಂದ ಪ್ರಿ ಬುಕ್ಕಿಂಗ್‌ಗೆ ರೆಡಿ ಇದ್ದು, ಇದೇ ಆಗಸ್ಟ್ 23 ರಿಂದ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್‌ ಅರೋರಾ ಗ್ರೀನ್ ಅಥವಾ ಟೈಟಾನಿಯಂ ಎಂಪ್ಟಿ ಗ್ರೇ ಬಣ್ಣದ ಆಯ್ಕೆಗಳಲ್ಲಿ ಪಡೆದಕೊಳ್ಳಬಹುದಾಗಿದೆ.

Best Mobiles in India

English summary
OnePlus Ace 2 Pro smartphone with 24GB RAM launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+