Home
ಸುದ್ದಿಜಾಲ

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಲಾಂಚ್‌! ಜಬರ್ದಸ್ತ್‌ ಫೀಚರ್ಸ್‌!

ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ವಲಯದಲ್ಲಿ ಸಿಕ್ಕಾಪಟ್ಟೆ ಕ್ರೇಜ್‌ ಇದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ಗಮನಸೆಳೆದಿದೆ. ಸದ್ಯ ಇದೀಗ ಹೊಸದಾಗಿ ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಲಾಂಚ್‌! ಜಬರ್ದಸ್ತ್‌ ಫೀಚರ್ಸ್‌!

ಒನ್‌ಪ್ಲಸ್‌ ಏಸ್‌ 2V ಡಿಸ್‌ಪ್ಲೇ ಹೇಗಿದೆ?

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ 6.74 ಇಂಚಿನ 2.5D ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,240x2,772 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 93.50 ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 1440Hz PWM ಡಿಮ್ಮಿಂಗ್ ಅನ್ನು ಹೊಂದಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಜೊತೆಗೆ 1450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ಏಸ್‌ 2V ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ನಲ್ಲಿ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ಮೆಮೊರಿ ಕಾರ್ಡ್‌ ಬೆಂಬಲಿಸುವುದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ.

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಲಾಂಚ್‌! ಜಬರ್ದಸ್ತ್‌ ಫೀಚರ್ಸ್‌!

ಒನ್‌ಪ್ಲಸ್‌ ಏಸ್‌ 2V ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ ಏಸ್‌ 2V ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 80W ಸೂಪರ್‌ವೂಕ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಫೋನ್‌ ಅನ್ನು ಕೇವಲ 32 ನಿಮಿಷಗಳಲ್ಲಿ 100% ಚಾರ್ಜಿಂಗ್‌ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.3, Beidou, Glonass, Galileo, GPS, ಇನ್ಫ್ರಾರೆಡ್ ರಿಮೋಟ್ ಕಂಟ್ರೋಲ್, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಲಾಂಚ್‌! ಜಬರ್ದಸ್ತ್‌ ಫೀಚರ್ಸ್‌!

ಒನ್‌ಪ್ಲಸ್‌ ಏಸ್‌ 2V ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್‌ ಏಸ್‌ 2V ಸ್ಮಾರ್ಟ್‌ಫೋನ್‌ ಚೀನಾದಲ್ಲಿ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 2,299 (ಸುಮಾರು 27,000ರೂ)ಬೆಲೆಗೆ ದೊರೆಯಲಿದೆ. ಇದರ 16GB + 256GB ಸ್ಟೋರೇಜ್‌ ಆಯ್ಕೆಯು CNY 2,499 (ಸುಮಾರು 29,000ರೂ)ಬೆಲೆಯಲ್ಲಿ ಲಭ್ಯವಾಗಲಿದೆ. ಇದನ್ನು ಬ್ಲ್ಯಾಕ್ ರಾಕ್ ಮತ್ತು ಸೆಲಡಾನ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
OnePlus Ace 2V is powered by a MediaTek Dimensity 9000 SoC, coupled with 16GB of RAM.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+