ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಒನ್‌ಪ್ಲಸ್ ಕಂಪೆನಿ ತನ್ನ ಪ್ರಿಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಟೆಕ್ ವಲಯದಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಒನ್‌ಪ್ಲಸ್ ಕಂಪೆನಿ ಹೊಸ ಒನ್‌ಪ್ಲಸ್ Ace ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 150W ಸೂಪರ್‌ವೂಕ್ ಚಾರ್ಜಿಂಗ್ ಬೆಂಬಲಿಸುವ 5000mAh ಬ್ಯಾಟರಿಯನ್ನು ಹೊಂದಿದೆ. ಇದರಿಂದ ಕೇವಲ ಐದು ನಿಮಿಷಗಳಲ್ಲಿ 0 ಟು 50% ವರೆಗೆ ಚಾರ್ಜ್ ಮಾಡಲು ಸಹಾಯ ಮಾಡುತ್ತದೆ.

ಹೌದು, ಒನ್‌ಪ್ಲಸ್ ಕಂಪೆನಿ ತನ್ನ ಹೊಸ ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೋನಿ IMX766 ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು 720Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಜೊತೆಗೆ 512GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8MP ಅಲ್ಟ್ರಾವೈಡ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಇದಲ್ಲದೆ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ಕ್ಯಾಮೆರಾ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯ ಬೆಂಬಲವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W ಸೂಪರ್‌ವೋಕ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ ಏಸ್ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 128GB ಸ್ಟೋರೇಜ್ ಆಯ್ಕೆಯು CNY 2499 (ಅಂದಾಜು 29,500ರೂ)ಬೆಲೆ ಹೊಂದಿದೆ. ಹಾಗೆಯೇ 8GB + 256GB ಸ್ಟೋರೇಜ್ ಆಯ್ಕೆಯೂ CNY 2699(ಅಂದಾಜು 30,700ರೂ)ಬೆಲೆ ಹೊಂದಿದೆ. ಇನ್ನು ಈ ಡಿವೈಸ್ 12GB + 256GB ಆಯ್ಕೆಗೆ CNY 2999 (ಸುಮಾರು 35,400ರೂ) ಮತ್ತು 12GB + 512GB CNY 3499 (ಸುಮಾರು 41,300ರೂ)ಬೆಲೆ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಆರ್ಕ್ಟಿಕ್ ಗ್ಲೋ ಮತ್ತು ಸ್ಟೆಲ್ಲರ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








