Home
ಸುದ್ದಿಜಾಲ

ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಟೆಕ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪೆನಿ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಐ ಪ್ರೊಟೆಕ್ಷನ್‌ ಮೋಡ್‌ ಅನ್ನು ಒಳಗೊಂಡಿದೆ. ಜೊತೆಗೆ 150W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಜೇಡ್ ಗ್ರೀನ್ ಮತ್ತು ಮೂನ್‌ಸ್ಟೋನ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದ್ದು, 20.1:9 ರಚನೆಯ ಅನುಪಾತವನ್ನು ಹೊಂದಿದೆ. ಇದು 93.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 950 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಹೊಂದಿದ್ದು, ಐ ಪ್ರೊಟೆಕ್ಷನ್‌ ಮೋಡ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಆಧಾರಿತ ColorOS 12.1 ಬೆಂಬಲವನ್ನು ಪಡೆದಿದೆ. ಹಾಗೆಯೇ Adreno 730 GPU ಸಪೋರ್ಟ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ?

ಒನ್‌ಪ್ಲಸ್‌ ಏಸ್‌ ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ ಏಸ್‌ ಪ್ರೊ 5G ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 6, ಬ್ಲೂಟೂತ್‌ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದು ಡಾಲ್ಬಿ ಅಟ್ಮೋಸ್‌ ಬೆಂಬಲದೊಂದಿಗೆ ಡ್ಯುಯಲ್-ಸ್ಟಿರಿಯೊ ಸ್ಪೀಕರ್ ಸೆಟಪ್ ಮತ್ತು ಡ್ಯುಯಲ್-ಮೈಕ್ರೊಫೋನ್ ಸೆಟಪ್ ಅನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್‌ ಏಸ್‌ ಪ್ರೊ ಸದ್ಯ ಚೀನಾ ಮಾರುಕಟ್ಟೆಯಲ್ಲಿ 16GB + 256GB ಸ್ಟೋರೇಜ್‌ ಆಯ್ಕೆಗೆ CNY 3,799 (ಅಂದಾಜು 44,800ರೂ)ಬೆಲೆ ಹೊಂದಿದೆ. ಇನ್ನು 12GB RAM + 256GB ಸ್ಟೋರೇಜ್ ಆಯ್ಕೆಯು CNY 3,499 (ಅಂದಾಜು 41,200ರೂ) ಬೆಲೆ ಹೊಂದಿದೆ. ಇದಲ್ಲದೆ 16GB RAM + 512GB ಸ್ಟೋರೇಜ್‌ ಆಯ್ಕೆಯು CNY 4,299 (ಸುಮಾರು 50,700ರೂ) ಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಜೇಡ್ ಗ್ರೀನ್ ಮತ್ತು ಮೂನ್‌ಸ್ಟೋನ್ ಕಪ್ಪು ಬಣ್ಣದ ಆಯ್ಕೆಗಳನ್ನು ಹೋಲುತ್ತದೆ.

Best Mobiles in India

English summary
OnePlus Ace Pro is a dual-SIM (Nano) 5G smartphone. It runs on Android 12-based ColorOS 12.1. It sports a 6.7-inch AMOLED display with up to 120Hz refresh rate.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+