ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಬಹಿರಂಗ!
ಒನ್‌ಪ್ಲಸ್ ಕಂಪೆನಿ ತನ್ನ ಪ್ರಿಮೀಯಂ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಮಾರ್ಟ್‌ಫೋನ್‌ಗಳಿಂದ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 28 ರಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಏಪ್ರಿಲ್ 28 ರಂದು ಸಂಜೆ 7pmಗೆ ಲಾಂಚ್ ಈವೆಂಟ್ ನಡೆಸುವುದಾಗಿ ಒನ್‌ಪ್ಲಸ್ ಕಂಪೆನಿ ಹೇಳಿಕೊಂಡಿದೆ.

ಹೌದು, ಒನ್‌ಪ್ಲಸ್ ಕಂಪೆನಿ ಭಾರತದಲ್ಲಿ ತನ್ನ ಹೊಸ ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಅನ್ನು ಏಪ್ರಿಲ್ 28 ರಂದು ಲಾಂಚ್ ಮಾಡಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8100-MAX ಪ್ರೊಸೆಸರ್ ಹೊಂದಿರಲಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ 10R 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ HDR10+ ಗೆ ಬೆಂಬಲ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹೊಂದಿರಲಿದೆ

ಪ್ರೊಸೆಸರ್ ಯಾವುದು?
ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8100-MAX ಪ್ರೊಸೆಸರ್ ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.

ಕ್ಯಾಮೆರಾ ವಿಶೇಷ
ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 MP ಸೆನ್ಸಾರ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W ಚಾರ್ಜಿಂಗ್ ಬೆಂಬಲಿಸಲಿದೆ. 80W ಚಾರ್ಜಿಂಗ್ ಆಯ್ಕೆಯೂ ಸಹ ಲಭ್ಯವಿರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ 2.0 ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ 10R ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 28 ರಂದು ಬಿಡುಗಡೆಯಾಗಲಿದೆ. ಇದು ಯಾವ ಕಲರ್ ಆಯ್ಕೆಗಳಲ್ಲಿ ಬರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಈ ಸ್ಮಾರ್ಟ್‌ಫೋನಿನ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ.


Click it and Unblock the Notifications








