Home
ಸುದ್ದಿಜಾಲ

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್‌ ಲಾಂಚ್; 50ಎಂಪಿ ಕ್ಯಾಮೆರಾ!

ಜಾಗತಿಕ ಮೊಬೈಲ್ ಮಾರುಕಟ್ಟೆಯಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲೊಂದಾಗಿ ಗುರುತಿಸಿಕೊಂಡಿರುವ ಒನ್‌ಪ್ಲಸ್‌ ಸಂಸ್ಥೆಯು ನಾರ್ಡ್‌ ಸರಣಿಯಲ್ಲಿ ಮೀಡ್‌ರೇಂಜ್‌ ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಅದೇ ಸರಣಿಯಲ್ಲಿ ಮತ್ತೆ ನೂತನವಾಗಿ ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ 4,500mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 65W ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್‌ ಲಾಂಚ್; 50ಎಂಪಿ ಕ್ಯಾಮೆರಾ!

ಹೌದು, ಒನ್‌ಪ್ಲಸ್‌ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಸರಣಿಯನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಇನ್ನು ಈ ಫೋನ್ ಬ್ಲೂ, ಗ್ರೇ ಹಾಗೂ ಗ್ರೀನ್‌ ವುಡ್‌ ಮ್ಯಾಟ್‌ ಫಿನಿಶಿಂಗ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ ನಾರ್ಡ್‌ 2 5G ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್‌ ಲಾಂಚ್; 50ಎಂಪಿ ಕ್ಯಾಮೆರಾ!

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್‌ ಲಾಂಚ್; 50ಎಂಪಿ ಕ್ಯಾಮೆರಾ!

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಡಾರ್ಕ್ ಮೋಡ್ ಮತ್ತು ಒನ್‌ಪ್ಲಸ್ ಗೇಮ್ಸ್ ಅಪ್ಲಿಕೇಶನ್‌ ಸಪೋರ್ಟ್ ಪಡೆದಿದೆ. ಅದು ಗೇಮ್ ಫಿಲ್ಟರ್‌ಗಳನ್ನು ಒದಗಿಸುತ್ತದೆ. ಹಾಗೆಯೇ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಸೇರಿವೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ ನಾರ್ಡ್ 2 5G ಮೂರು ಮಾದರಿಗಳಲ್ಲಿ ಎಂಟ್ರಿ ಪಡೆದಿದೆ. ಅವು ಕ್ರಮವಾಗಿ 6 GB RAM + 128GB, 8GB RAM + 128GB ಮತ್ತು 12GB RAM + 256GB ಆಗಿವೆ. 6GB RAM ಮತ್ತು 128GB ಬೇಸ್ ವೇರಿಯಂಟ್ ಬೆಲೆಯು 27,999ರೂ. ಆಗಿದೆ. ಅದೇ ರೀತಿ 8GB RAM ಮತ್ತು 128GB ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಇನ್ನು 12GB RAM + 256GB ಸ್ಟೋರೇಜ್‌ನ ಟಾಪ್‌ ಮಾಡೆಲ್ ದರವು 34,999ರೂ. ಆಗಿದೆ. ಅಮೆಜಾನ್ ಇ-ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
ONEPLUS NORD 2 5G With Triple Rear Cameras Launched: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+