ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಬಿಡುಗಡೆ! ಬೆಲೆ ಎಷ್ಟು?

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದೆ. ತನ್ನ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಕಾಸ್ಮೆಟಿಕ್ ಚೇಂಜ್‌ ಲಿಸ್ಟ್‌ ಮತ್ತು ಐಕಾನಿಕ್ ಜಟಿಲ ಆಕ್ಷನ್ ಗೇಮ್‌ ಅನ್ನು ಪ್ರತಿಬಿಂಬಿಸುವುದಕ್ಕಾಗಿ ಹೊಸ ಪ್ಯಾಕೇಜಿಂಗ್‌ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ

ಹೌದು, ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ Pac-Man ಪ್ರೇರಿತ ಫಿನಿಶ್ ಹೊಂದಿದೆ. ಎಲ್ಲಾ Pac-Man ಗೇಮರುಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮಾರ್ಟ್‌ಫೋನ್‌ ಇದಾಗಿದೆ. ಇನ್ನು ಈ ಫೋನ್‌ 6.43 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 1200-AI SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು Fluid AMOLED ಡಿಸ್‌ಪ್ಲೇಯಾಗಿದ್ದು, 20:9 ರಚನೆಯ ಅನುಪಾತವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ MediaTek ಡೈಮೆನ್ಸಿಟಿ 1200-AI SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಟ್ರಿಪಲ್‌ ಕ್ಯಾಮೆರಾ

ಟ್ರಿಪಲ್‌ ಕ್ಯಾಮೆರಾ

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 f/1.88 ಲೆನ್ಸ್ ಮತ್ತು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್‌ಸಾರ್‌ f/2.25 ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ Sony IMX615 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಸಾಮರ್ಥ್ಯ

ಬ್ಯಾಟರಿ ಸಾಮರ್ಥ್ಯ

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು Warp Charge 65 ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಜೊತೆಗೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೋಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.

ಇತರೆ ಫೀಚರ್ಸ್‌

ಇತರೆ ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಸ್ಮಾರ್ಟ್‌ಫೋನ್‌ ಬ್ಯಾಕ್ ಪ್ಯಾನೆಲ್ ಜೊತೆಗೆ, Pac-Man ಸಿಲಿಕೋನ್ ಕೇಸ್ ಮತ್ತು Pac-Man ಫೋನ್ ಹೋಲ್ಡರ್ ಅನ್ನು ಒಳಗೊಂಡಿದೆ. ಇದು ಉಚಿತ ರೆಡ್ ಕೇಬಲ್ ಕ್ಲಬ್ ಲಾಯಲ್ಟಿ ಸದಸ್ಯತ್ವವನ್ನು ಸಹ ನೀಡಲಿದೆ. Pac-Man-ಪ್ರೇರಿತ ವಾಲ್‌ಪೇಪರ್‌ಗಳು, ರಿಂಗ್‌ಟೋನ್‌ಗಳು ಮತ್ತು ಐಕಾನ್‌ಗಳು ಮತ್ತು ಚಾರ್ಜಿಂಗ್ ಮತ್ತು ಫಿಂಗರ್‌ಪ್ರಿಂಟ್ ಅನ್‌ಲಾಕ್ ಅನಿಮೇಷನ್‌ಗಳೊಂದಿಗೆ OxygenOS ಅನ್ನು ತಿರುಚಲು OnePlus Pac-Man ಡೆವಲಪರ್ ಬಂದೈ ನಾಮ್ಕೊ ಎಂಟರ್‌ಟೈನ್‌ಮೆಂಟ್‌ನೊಂದಿಗೆ ಸಹಭಾಗಿತ್ವ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್‌ ನಾರ್ಡ್‌ 2x Pac Man ಆವೃತ್ತಿ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ಕಾನ್ಫಿಗರೇಶನ್‌ಗಾಗಿ 37,999ರೂ.ಬೆಲೆ ಹೊಂದಿದೆ. ಇದು ಇಂದಿನಿಂದ Amazon ಮತ್ತು OnePlus.in ಮೂಲಕ ಸೇಲ್‌ ಆಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದ ಜೊತೆಗೆ ಯುರೋಪ್‌ನಲ್ಲಿ EUR 529 (ಸುಮಾರು ರೂ. 44,900) ನಲ್ಲಿ ಲಭ್ಯವಿದೆ.

Best Mobiles in India

English summary
OnePlus Nord 2 x Pac-Man Edition price in India is set at Rs. 37,999.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X