ಬಹು ನಿರೀಕ್ಷಿತ ಒನ್‌ಪ್ಲಸ್ ನಾರ್ಡ್ 3 ಫೀಚರ್ಸ್ ಬಹಿರಂಗ! ಏನೆಲ್ಲಾ ನಿರೀಕ್ಷೆ?
ಒನ್‌ಪ್ಲಸ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಅದರಂತೆ ಒನ್‌ಪ್ಲಸ್ ಕಂಪೆನಿ ಕೂಡ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿದೆ. ಪ್ರಸ್ತುತ ತನ್ನ ಮುಂದಿನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ ನಾರ್ಡ್ 3 ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.
ಹೌದು, ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಫೀಚರ್ಸ್ ಹಾಗೂ ಬಿಡುಗಡೆ ದಿನಾಂಕ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಸ್ಮರ್ಟ್‌ಫೋನ್ ಇದೇ ವರ್ಷ ಜೂನ್ ಮತ್ತು ಜುಲೈ ನಡುವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್ ನಾರ್ಡ್ 3 ಫೀಚರ್ಸ್ ನಿರೀಕ್ಷೆ ಏನು?
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಜೂನ್ ಮತ್ತು ಜುಲೈ ನಡುವೆ ಬಿಡುಗಡೆಯಾಗಬಹುದು. ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದ್ದು, 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಬಹುದು ಎನ್ನಲಾಗಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಹೊಂದಿರಲಿದ್ದು, ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ಒನ್‌ಪ್ಲಸ್ ನಾರ್ಡ್ 3 ಪ್ರೊಸೆಸರ್ ಯಾವುದು?
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಡೈಮೆನ್ಸಿಟಿ 9000SoC ಪ್ರೊಸೆಸರ್‌ನಲ್ಲಿ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಒನ್‌ಪ್ಲಸ್ ನಾರ್ಡ್ 3 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಒನ್‌ಪ್ಲಸ್ ನಾರ್ಡ್ 3 ಬ್ಯಾಟರಿ ಯಾವುದು?
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ 80W SuperVOOC ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇದಲ್ಲದೆ ಆಕ್ಸಿಲೆರೋ ಮೀಟರ್, ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಕಂಪಾಸ್, ಅನ್ನು ಹೊಂದಿರುವ ನಿರೀಕ್ಷೆಯಿದೆ.

ಒನ್‌ಪ್ಲಸ್ ನಾರ್ಡ್ 3 ಬೆಲೆ ಏನಿರಬಹುದು?
ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇದರ ನಿಖರವಾದ ಬೆಲೆ ಬಿಡುಗಡೆಯ ದಿನಾಂಕ ಹತ್ತಿರವಾದಾಗ ಬಹಿರಂಗವಾಗುವ ಸಾಧ್ಯತೆಯಿದೆ.
ಇದಲ್ಲದೆ ಒನ್‌ಪ್ಲಸ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,440x3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಹೊಂದಿದೆ. ಇದು ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ "ರಿಯಾಲಿಟಿ" ಸ್ಪೀಕರ್‌ಗಳನ್ನು ಹೊಂದಿದೆ.


Click it and Unblock the Notifications








