Home
ಸುದ್ದಿಜಾಲ

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಒನ್‌ಪ್ಲಸ್‌ ಕಂಪೆನಿ ಭಾರತದಲ್ಲಿ ತನ್ನ ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಳೆದ ವರ್ಷ ಬಿಡುಗಡೆ ಆಗಿದ್ದ ಒನ್‌ಪ್ಲಸ್‌ ನಾರ್ಡ್‌ CE 5G ಯ ​​ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 65W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 23,999ರೂ. ಹೊಂದಿದೆ. ಹಾಗಾದ್ರೆ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ HDR10+ ಪ್ರಮಾಣೀಕರಣ ಮತ್ತು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ sRGB ಮತ್ತು ಡಿಸ್‌ಪ್ಲೇ P3 ಕಲರ್‌ ಹರವು ಬೆಂಬಲವನ್ನು ನೀಡುತ್ತದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ CE 2 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಈ ಎರಡೂ ಕ್ಯಾಮೆರಾಗಳು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲದೊಂದಿಗೆ ಬರುತ್ತವೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 23,999ರೂ.ಬೆಲೆ ಹೊಂದಿದೆ. ಆದರೆ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 24,999ರೂ.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಹಾಮಾ ಬ್ಲೂ ಮತ್ತು ಗ್ರೇ ಮಿರರ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್‌ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಫೆಬ್ರವರಿ 22 ರಿಂದ ಮಾರಾಟವಾಗಲಿದೆ.

Best Mobiles in India

English summary
OnePlus Nord CE 2 5G With 4,500mAh battery Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+