ಒನ್‌ಪ್ಲಸ್‌ನ ಈ ಫೋನಿಗೆ ಮತ್ತೆ ಬಿಗ್ ಡಿಸ್ಕೌಂಟ್!..ಆಫರ್ ಬೆಲೆ ಎಷ್ಟು ತಿಳಿಯಿರಿ!
ಮೊಬೈಲ್ ಮಾರುಕಟ್ಟೆಯಲ್ಲಿ ಕೆಲವು ಪ್ರೀಮಿಯಂ ಮಾದರಿಯ ಫೋನ್‌ಗಳ ಮೂಲಕ ಜನಪ್ರಿಯ ಸ್ಥಾನ ಪಡೆದಿರುವ ಒನ್‌ಪ್ಲಸ್ ಬ್ರ್ಯಾಂಡ್ ಭಿನ್ನ ಶ್ರೇಣಿಯ ಫೋನ್‌ಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಬಜೆಟ್ ದರದಲ್ಲಿ ಗ್ರಾಹಕರನ್ನು ಸೆಳೆದಿದ್ದು, ಆದರೆ ಈಗ ಈ ಫೋನ್ ಬಿಗ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್ ಸಂಸ್ಥೆಯ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಶೇ. 10% ರಷ್ಟು ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6GB RAM + 128GB ಆಂತರೀಖ ಸ್ಟೋರೇಜ್ ವೇರಿಯಂಟ್ ದರವು 19,999ರೂ. ಆಗಿದ್ದು, ಆದರೆ ಅಮೆಜಾನ್ ಕೊಡುಗೆಯಲ್ಲಿ ಗ್ರಾಹಕರು ಇದನ್ನು 17,999ರೂ. ಗಳಿಗೆ ಕೊಂಡುಕೊಳ್ಳಬಹುದು.

ಇನ್ನು ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದರ ಜೊತೆಗೆ 6GB RAM + 128 GB ಮತ್ತು 8GB RAM + 128 GB ಆಯ್ಕೆಗಳನ್ನು ಪಡೆದುಕೊಂಡಿದೆ. ಇದರೊಂದಿಗೆ 33W ಸೂಪರ್VOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಇನ್ನುಳಿದಂತೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಡಿಸ್‌ಪ್ಲೇ ರಚನೆ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಅನ್ನು ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಇದು ಒಳಗೊಂಡಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆ ಇದೆ.
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಪ್ರೊಸೆಸರ್ ಬಲ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಅನ್ನು ಇದು ಪಡೆದುಕೊಂಡಿದೆ. ಅಲ್ಲದೇ 6GB RAM + 128 GB ಮತ್ತು 8GB RAM + 128 GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳ ಇವೆ.
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಟ್ರಿಪಲ್ ಕ್ಯಾಮೆರಾ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಫೋನ್ ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಹೊಂದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಬ್ಯಾಟರಿ ಮತ್ತು ಇತರೆ ಆಯ್ಕೆ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಯುಎಸ್‌ಬಿ ಟೈಪ್-ಸಿ ಮೂಲಕ 33W ಸೂಪರ್ VOOC ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಇದು ಪಡೆದಿದೆ. ಹಾಗೆಯೇ ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಪಡೆದುಕೊಂಡಿದೆ.


Click it and Unblock the Notifications








