ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

|

ಮೊಬೈಲ್ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪನಿಯು ಫ್ಲ್ಯಾಗ್‌ಶಿಪ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿದೆ. ನೀವೇನಾದರೂ ಹೊಸದಾಗಿ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸಬೇಕು ಅಂದುಕೊಂಡಿದ್ದರೇ, ಕೂಡಲೇ ಖರೀದಿಸಿ ಬಿಡಿ. ಏಕೆಂದರೆ, ಕಂಪನಿಯು ತನ್ನ ಜನಪ್ರಿಯ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G (OnePlus Nord CE 2 Lite 5G) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಇಳಿಕೆ ಮಾಡಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಸಂಸ್ಥೆಯ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಈಗ ಅಧಿಕೃತ ಒನ್‌ಪ್ಲಸ್‌ ವೆಬ್‌ಸೈಟ್‌, ಅಮೆಜಾನ್‌ ತಾಣ, ಕ್ರೋಮ್‌ ಹಾಗೂ ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್ ಗಳಲ್ಲಿ 1,000ರೂ. ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಮಾಡೆಲ್

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 6GB RAM ನೊಂದಿಗೆ ಬರುತ್ತದೆ ಮತ್ತು ಇದರ ಬೆಲೆ 19,999ರೂ ಆಗಿದ್ದು, ಬೆಲೆ ಇಳಿಕೆಯಿಂದಾಗಿ 18,999ರೂ.ಗೆ ಲಭ್ಯ. ಹಾಗೆಯೇ ಟಾಪ್ ಮಾಡೆಲ್ 8GB RAM ನೊಂದಿಗೆ 21,999 ರೂ. ಆಗಿದ್ದು, ಬೆಲೆ ಕಡಿತದಿಂದಾಗಿ ಗ್ರಾಹಕರು 20,999ರೂ. ಗೆ ಪಡೆಯಬಹುದು. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ HDR10+ ಪ್ರಮಾಣೀಕರಣ ಮತ್ತು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ sRGB ಮತ್ತು ಡಿಸ್‌ಪ್ಲೇ P3 ಕಲರ್‌ ಹರವು ಬೆಂಬಲವನ್ನು ನೀಡುತ್ತದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಒನ್‌ಪ್ಲಸ್‌ CE 2 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಈ ಎರಡೂ ಕ್ಯಾಮೆರಾಗಳು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲದೊಂದಿಗೆ ಬರುತ್ತವೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಹಾಮಾ ಬ್ಲೂ ಮತ್ತು ಗ್ರೇ ಮಿರರ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
OnePlus Nord CE 2 Lite 5G gets a price cut in India; Check New Price, offers and more.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X