ಒನ್‌ಪ್ಲಸ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ: ಈ ಚಾನ್ಸ್ ಮಿಸ್ ಮಾಡ್ಕೋಬೇಡಿ!
ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿರುವ ಒನ್‌ಪ್ಲಸ್ ಬ್ರ್ಯಾಂಡ್ ಜನಪ್ರಿಯ ಮೊಬೈಲ್ ಸಂಸ್ಥೆಗಳಲ್ಲಿ ಒಂದಾಗಿದೆ. ಸಂಸ್ಥೆಯು ಇತ್ತೀಚಿಗಿನ ಫೋನ್‌ಗಳಲ್ಲಿ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಬಜೆಟ್ ದರದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈಗ ಖುಷಿ ವಿಷಯವೆಂದರೆ, ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಡಿಸ್ಕೌಂಟ್ ಲಭ್ಯವಾಗಿದೆ.
ಹೌದು, ಜನಪ್ರಿಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಶೇ. 10% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್ 19,999ರೂ. ಇದ್ದು, ಆದರೆ ಆಫರ್‌ನಲ್ಲಿ ಗ್ರಾಹಕರು ಈಗ 17,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ ಇಲ್ಲಿದೆ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಪಡೆದಿದ್ದು, 202ppi ಪಿಕ್ಸೆಲ್ ಸಾಂದ್ರತೆ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಪಡೆದಿದೆ. ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಒಳಗೊಂಡಿದೆ.
ಪ್ರೊಸೆಸರ್ ಸ್ಯಾಮರ್ಥ್ಯದ ಮಾಹಿತಿ ಇಲ್ಲಿದೆ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಸಾಮರ್ಥ್ಯ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಮೊಬೈಲ್ 6GB RAM + 128 GB ಮತ್ತು 8GB RAM + 128 GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ.
ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ವಿಶೇಷ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ತ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನು ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಪಡೆದಿದೆ. ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ ಇಲ್ಲಿದೆ : ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಯುಎಸ್‌ಬಿ ಟೈಪ್-ಸಿ ಮೂಲಕ 33W ಸೂಪರ್VOOC ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಹಾಗೆಯೇ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಸೌಲಭ್ಯ ಇವೆ.


Click it and Unblock the Notifications








