ಭಾರತದಕ್ಕೆ ಲಗ್ಗೆ ಇಟ್ಟ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಫೋನ್!
ಒನ್‌ಪ್ಲಸ್ ಕಂಪೆನಿ ಭಾರತದಲ್ಲಿ ತನ್ನ ಬಹುನಿರೀಕ್ಷಿತ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಬಿಡುಗಡೆ ಆಗಿದ್ದ ಒನ್‌ಪ್ಲಸ್ ನಾರ್ಡ್ CE 5G ಯ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಸೂಪರ್VOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಹೌದು, ಒನ್‌ಪ್ಲಸ್ ಕಂಪೆನಿ ಹೊಸ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 120Hz ನ ಡೈನಾಮಿಕ್ ರಿಫ್ರೆಶ್ ರೇಟ್ ಪಡೆದಿದ್ದು, ಹೈ ಎಂಡ್ ರೆಸಲ್ಯೂಶನ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ 6GB RAM + 128GB ವೇರಿಯಂಟ್‌ನ ಬೆಲೆ 19,999 ರೂ. ಹೊಂದಿದೆ. ಹಾಗಾದ್ರೆ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ ಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಪವರ ಯಾವುದು?
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.
ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ.ಬೆಲೆ ಹೊಂದಿದೆ. ಆದರೆ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 21,999ರೂ.ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications