Home
ಸುದ್ದಿಜಾಲ

ಹೊಸ ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಇಲ್ಲಿದೆ ಗುಡ್‌ನ್ಯೂಸ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪನಿಯ ಕೆಲವು ಫೋನ್‌ಗಳು ಗ್ರಾಹಕರನ್ನು ಅಟ್ರ್ಯಾಕ್ಟ್‌ ಮಾಡಿವೆ. ಅವುಗಳ ಪೈಕಿ ಸಂಸ್ಥೆಯ ಒನ್‌ಪ್ಲಸ್‌ ನಾರ್ಡ್‌ CE 3 5G ಮೊಬೈಲ್‌ ಸಹ ಒಂದಾಗಿದ್ದು, ಈ ಮೊಬೈಲ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಬೊಂಬಾಟ್‌ ರಿಯಾಯಿತಿ ಪಡೆದಿದ್ದು, ಹೊಸ ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.

ಹೌದು, ಜನಪ್ರಿಯ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 5G ಮೊಬೈಲ್‌ ಶೇ. 7% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ 8GB RAM + 128GB ವೇರಿಯಂಟ್‌ ಫೋನ್‌ ಆಫರ್‌ನಲ್ಲಿ 24,999ರೂ. ದರದಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನಿಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಸಹ ಲಭ್ಯ ಆಗಲಿವೆ. ಅವುಗಳನ್ನು ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ದರದಲ್ಲಿ ಫೋನ್‌ ಖರೀದಿಸಬಹುದು.

ಹೊಸ ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಇಲ್ಲಿದೆ ಗುಡ್‌ನ್ಯೂಸ್‌!

ಇನ್ನು ಒನ್‌ಪ್ಲಸ್‌ನ ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ CE 3 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್‌ CE 3 5G - ಫೀಚರ್ಸ್‌ ಮಾಹಿತಿ

ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಮಾಡಲಿದ್ದು, 87.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್‌ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು 8GB RAM + 128GB ಆಂತರೀಕ ಸ್ಟೋರೇಜ್‌ ಹಾಗೂ 12GB RAM + 256GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಯಲ್ಲಿಯೂ ಸಹ ಖರೀದಿಗೆ ಲಭ್ಯವಾಗಲಿದೆ.

ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್‌ ಸೌಲಭ್ಯ ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5.2, NFC, GPS, A-GPS ಮತ್ತು USB ಟೈಪ್-C ಪೋರ್ಟ್ ಆಯ್ಕೆಗಳು ಇವೆ.

Best Mobiles in India

English summary
Oneplus Nord CE 3 5G available at awesome offer price on amazon. check offer price and specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+