Home
ಸುದ್ದಿಜಾಲ

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ ಬೆಸ್ಟ್‌ ಆಫರ್‌!

ಒನ್‌ಪ್ಲಸ್‌ ಕಂಪೆನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ನಾರ್ಡ್‌ CE 3 ಅಮೆಜಾನ್‌ ತಾಣದಲ್ಲಿ ವಿಶೇಷ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಇದೇ ವರ್ಷ ಬಿಡುಗಡೆ ಆಗಿರುವ ಪ್ರಮುಖ ಫೋನ್‌ಗಳಲ್ಲಿ ಒಂದಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಂಡಿರುವ ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ.

ಹೌದು, ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದಿದೆ. ಇದರಿಂದ ಮೂಲಬೆಲೆಗಿಂತ ಕಡಿಮೆ ಬೆಲೆಗೆ ಈ ಫೋನ್‌ ಅನ್ನು ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಪಡೆದುಕೊಂಡಿರುವ ಡಿಸ್ಕೌಂಟ್‌ ವಿವರಗಳನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ ಬೆಸ್ಟ್‌ ಆಫರ್‌!

ಒನ್‌ಪ್ಲಸ್‌ ನಾರ್ಡ್‌ CE 3 ಡಿಸ್ಕೌಂಟ್‌ ಎಷ್ಟು?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ 26,999ರೂ ಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಇದರ ಮೇಲೆ 7% ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಅನ್ನು ಇದೀಗ ಕೇವಲ 24,999ರೂ ಬೆಲೆಗೆ ಲಭ್ಯವಾಗಲಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡಲಾಗ್ತಿದ್ದು, ಇದು ಫೋನ್‌ ಬೆಲೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಡಿಮೆ ಮಾಡಲಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಫೀಚರ್ಸ್‌ ಹೇಗಿದೆ?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಹೊಂದಿದ. ಇದು 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡದುಕೊಂಡಿದ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿದೆ.

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ ಬೆಸ್ಟ್‌ ಆಫರ್‌!

ಒನ್‌ಪ್ಲಸ್‌ ನಾರ್ಡ್‌ CE 3 ಪ್ರೊಸೆಸರ್‌ ಯಾವುದು?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಅಡ್ರಿನೋ 642L GPU ಬೆಂಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್ ನಂತಹ ಕೆಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ಗೆ ಅಮೆಜಾನ್‌ನಲ್ಲಿ ಬೆಸ್ಟ್‌ ಆಫರ್‌!

ಒನ್‌ಪ್ಲಸ್‌ ನಾರ್ಡ್‌ CE 3 ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80w ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಬೆಲೆ ಮತ್ತು ಲಭ್ಯತೆ
ಸದ್ಯ ಅಮೆಜಾನ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ನ 8 GB RAM + 128 GB ವೇರಿಯೆಂಟ್‌ ಆಯ್ಕೆಯ ಮೇಲೆ ಡಿಸ್ಕೌಂಟ್‌ ದೊರೆಯುತ್ತಿದೆ. ಇದನ್ನು ಡಿಸ್ಕೌಂಟ್‌ನಲ್ಲಿ ನೀವು 24,999ರೂ ಬೆಲೆಗೆ ಖರೀದಿಸಬಹುದಾಗಿದೆ.

Best Mobiles in India

English summary
Oneplus Nord CE 3 5G get huge Discount on amazon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+