ಒನ್‌ಪ್ಲಸ್ ನಾರ್ಡ್ CE 3 5G ಫೋನ್ ಬೆಲೆಯಲ್ಲಿ ನೇರ ಇಳಿಕೆ!..ಗ್ರಾಹಕರಿಗೆ ಖುಷಿ!
ಒನ್‌ಪ್ಲಸ್ ಮೊಬೈಲ್ ಕಂಪನಿಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಟ್ರೆಂಡಿ ಎನಿಸಿವೆ. ಅವುಗಳಲ್ಲಿ ಒನ್‌ಪ್ಲಸ್ ನಾರ್ಡ್ CE 3 5G ಫೋನ್ ಕೂಡಾ ಒಂದು. ಇದೀಗ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದಿದ್ದು, ಒನ್‌ಪ್ಲಸ್ ಫೋನ್ ಖರೀದಿಸುವ ಗ್ರಾಹಕರಿಗೆ ಸಂತಸ ಎನಿಸಿದೆ.
ಹೌದು, ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್ ನಾರ್ಡ್ CE 3 5G ಫೋನ್ ಶೇ. 7% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB RAM + 128GB ವೇರಿಯಂಟ್ ಫೋನ್ 24,999ರೂ. ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಇದರೊಂದಿಗೆ ಬ್ಯಾಂಕ್ ಆಫರ್ ಸಹ ಗ್ರಾಹಕರಿಗೆ ಲಭ್ಯ ಆಗಲಿವೆ.

ಈ ಮೊಬೈಲ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದರ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಆಗಿದ್ದು, ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಇದೆ. ಹಾಗಾದರೇ ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ ನಾರ್ಡ್ CE 3 5G - ಫೀಚರ್ಸ್ ಹೀಗಿವೆ
ಒನ್‌ಪ್ಲಸ್ ನ ಈ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 87.9% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ಒನ್‌ಪ್ಲಸ್ ನಾರ್ಡ್ CE 3 5G ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 12GB RAM + 256GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯಲ್ಲಿಯೂ ಸಹ ದೊರೆಯಲಿದೆ.
ಒನ್‌ಪ್ಲಸ್ ನಾರ್ಡ್ CE 3 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೋನಿ IMX355 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ 4cm ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.
ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 80W SuperVOOC ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ 5G, 4G LTE, Wi-Fi, ಬ್ಲೂಟೂತ್ 5.2, NFC, GPS, A-GPS ಮತ್ತು USB ಟೈಪ್-C ಪೋರ್ಟ್ ಕಾಣಬಹುದಾಗಿದೆ.. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಐಆರ್ ಬ್ಲಾಸ್ಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಟೆಂಪ್‌ರೇಚರ್ ಸೆನ್ಸಾರ್ ಹೊಂದಿದೆ.


Click it and Unblock the Notifications








