Home
ಸುದ್ದಿಜಾಲ

ದೇಶಿಯ ಮಾರುಕಟ್ಟೆಯಲ್ಲಿ 'ಒನ್‌ಪ್ಲಸ್‌ ನಾರ್ಡ್‌ CE 3' ಲಾಂಚ್!..ಏನಿದೆ ಹೊಸತು?

ಮಾರುಕಟ್ಟೆಯಲ್ಲಿ ಪ್ರಮುಖ ಮೊಬೈಲ್‌ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಒನ್‌ಪ್ಲಸ್‌ ಸಂಸ್ಥೆಯು ನಾರ್ಡ್‌ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಮತ್ತೆ ನೂತನವಾಗಿ ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 80W ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಹೌದು, ಒನ್‌ಪ್ಲಸ್‌ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ.

ದೇಶಿಯ ಮಾರುಕಟ್ಟೆಯಲ್ಲಿ 'ಒನ್‌ಪ್ಲಸ್‌ ನಾರ್ಡ್‌ CE 3' ಲಾಂಚ್!..ಏನಿದೆ ಹೊಸತು?

ಹಾಗೆಯೇ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒದಗಿಸಲಾಗಿದೆ. ಇನ್ನು ಈ ಫೋನ್ 12GB RAM + 256GB ಸ್ಟೋರೇಜ್‌ ಆಯ್ಕೆ ಅನ್ನು ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ ನಾರ್ಡ್‌ CE 3 ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನು ಪಡೆದಿದ್ದು, ಡಿಸ್‌ಪ್ಲೇಯ 120Hz ರಿಫ್ರೆಶ್ ರೇಟ್ ಪಡೆದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಅದರೊಂದಿಗೆ ಅಡ್ರಿನೋ 642L GPU ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್ ನಂತಹ ಕೆಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80w ಸೂಪರ್‌ವೂಕ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಅಂಡ್ರಾಯ್ಡ್‌ 13 ಓಎಸ್‌ ಸಫೋರ್ಟ್‌ ಪಡೆದಿದ್ದು, ಜೊತೆಗೆ ಆಕ್ಸಿಜನ್‌ 13.1 ಸ್ಕೀನ್ ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಸೇರಿವೆ.

ಬೆಲೆ ಮತ್ತು ಲಭ್ಯತೆ : ಒನ್‌ಪ್ಲಸ್‌ ನಾರ್ಡ್‌ CE 3 ಎರಡು ಮಾದರಿಗಳಲ್ಲಿ ಎಂಟ್ರಿ ಪಡೆದಿದೆ. ಅವು ಕ್ರಮವಾಗಿ 8 GB RAM + 128 GB ಮತ್ತು 12 GB RAM + 256 GB ಆಗಿವೆ. 8 GB RAM ಮತ್ತು 128 GB ವೇರಿಯಂಟ್ ಬೆಲೆಯು 26,999 ರೂ. ಆಗಿದೆ. ಇನ್ನು 12 GB RAM + 256 GB ಸ್ಟೋರೇಜ್‌ನ ಟಾಪ್‌ ಮಾಡೆಲ್ ದರವು 28,999 ರೂ. ಆಗಿದೆ. ಈ ಫೋನ್‌ ಅಗಷ್ಟ ತಿಂಗಳಿನಲ್ಲಿ ಮಾರಾಟ ಪ್ರಾರಂಭಿಸಲಾಗುವುದು ಎಂದು ತಿಳಿದುಬಂದಿದೆ.

Best Mobiles in India

English summary
OnePlus Nord CE 3 5G with 5,000mAh battery launched in India: Price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+