ಇಂದು 'ಒನ್‌ಪ್ಲಸ್ ನಾರ್ಡ್ CE 3' ಫಸ್ಟ್ ಸೇಲ್!..ಆಫರ್ ಎಷ್ಟು ಗೊತ್ತಾ?
ಮೊಬೈಲ್ ಪ್ರಿಯರ ಫೇವರೇಟ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಒನ್‌ಪ್ಲಸ್ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ 'ಒನ್‌ಪ್ಲಸ್ ನಾರ್ಡ್ CE 3' ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಮೊಬೈಲ್ ಇಂದು (ಅ 4 ರಂದು) ಅಧಿಕೃತ ಒನ್‌ಪ್ಲಸ್ ಆನ್‌ಲೈನ್ ಸ್ಟೋರ್ ಹಾಗೂ ಅಮೆಜಾನ್ ಇಂಡಿಯಾ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಸೇಲ್ ಪ್ರಾರಂಭಿಸಲಿದೆ.
ಹೌದು, ಒನ್‌ಪ್ಲಸ್ ನಾರ್ಡ್ CE 3 5G ಸ್ಮಾರ್ಟ್‌ಫೋನ್ ಇಂದು ಫಸ್ಟ್ ಸೇಲ್ ಶುರು ಮಾಡಲಿದ್ದು, ಭರ್ಜರಿ ಆಫರ್ ಸಹ ಲಭ್ಯವಾಗಲಿದೆ. ಈ ಫೋನ್ 8GB RAM + 128GB ಮತ್ತು 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 782G SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ.

ಇನ್ನು ಒನ್‌ಪ್ಲಸ್ ನಾರ್ಡ್ CE 3 ಫೋನ್ 8GB + 128GB ವೇರಿಯಂಟ್ ಬೆಲೆಯು 26,999ರೂ. ಆಗಿದ್ದು, 12GB + 256GB ಸ್ಟೋರೇಜ್ ವೇರಿಯಂಟ್ ದರವು 28,999ರೂ. ಆಗಿದೆ. ಈ ಫೋನ್ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ಒನ್‌ಪ್ಲಸ್ ನಾರ್ಡ್ CE 3 ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ : ಒನ್‌ಪ್ಲಸ್ ನಾರ್ಡ್ CE 3 ಮೊಬೈಲ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ 120Hz ರಿಫ್ರೆಶ್ ರೇಟ್ ಪಡೆದಿದೆ.
ಪ್ರೊಸೆಸರ್ ಪವರ್ ಹಾಗೂ ಮೆಮೊರಿ : ನೂತನ ಒನ್‌ಪ್ಲಸ್ ನಾರ್ಡ್ CE 3 ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 782G SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದೆ. ಜೊತೆಗೆ ಅಡ್ರಿನೋ 642L GPU ಬೆಂಬಲ ವನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 8GB RAM + 128GB ಹಾಗೂ 12 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ : ಒನ್‌ಪ್ಲಸ್ ನಾರ್ಡ್ CE 3 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಒದಗಿಸಲಾಗಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್ ನಂತಹ ಕೆಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ : ಒನ್‌ಪ್ಲಸ್ ನಾರ್ಡ್ CE 3 ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80w ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಅಂಡ್ರಾಯ್ಡ್ 13 ಓಎಸ್ ಸಫೋರ್ಟ್ ಪಡೆದಿದ್ದು, ಜೊತೆಗೆ ಆಕ್ಸಿಜನ್ 13.1 ಸ್ಕೀನ್ ಓಎಸ್ ಬೆಂಬಲ ಹೊಂದಿದೆ. ಇದರ ಜೊತೆಗೆ ಇತ್ತೀಚಿಗಿನ ಕನೆಕ್ಟಿವಿಟಿ ಸೌಲಭ್ಯಗಳು ಸೇರಿವೆ.
ಬೆಲೆ ಮತ್ತು ಲಭ್ಯತೆ : ಒನ್‌ಪ್ಲಸ್ ನಾರ್ಡ್ CE 3 ಫೋನ್ 8 GB RAM + 128 GB ಮತ್ತು 12 GB RAM + 256 GB ಆಯ್ಕೆ ಹೊಂದಿದೆ. ಆ ಪೈಕಿ 8 GB RAM ಮತ್ತು 128 GB ವೇರಿಯಂಟ್ ಬೆಲೆಯು 26,999 ರೂ. ಆಗಿದ್ದು, 12 GB RAM + 256 GB ಸ್ಟೋರೇಜ್‌ನ ಮಾಡೆಲ್ 28,999 ರೂ. ಬೆಲೆ ಪಡೆದಿದೆ. ಆ.4 ರಂದು ಅಮೆಜಾನ್ ತಾಣದಲ್ಲಿ ಫಸ್ಟ್ ಸೇಲ್ ಪ್ರಾರಂಭಿಸಲಿದೆ.


Click it and Unblock the Notifications








