Home
ಸುದ್ದಿಜಾಲ

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬಿಡುಗಡೆ ! ಬೆಲೆ ಎಷ್ಟು? ಫೀಚರ್ಸ್‌ ಹೇಗಿದೆ?

ಬಹು ನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ತನ್ನ ಅತ್ಯಾಕರ್ಷಕ ಡಿಸೈನ್‌ ಹಾಗೂ ಸ್ಟೈಲಿಶ್‌ ಲುಕ್‌ನಿಂದ ಮಾರುಕಟ್ಟೆಯಲ್ಲಿ ಹೊಸ ಬಿರುಗಾಳಿ ಎಬ್ಬಿಸುವ ಸೂಚನೆ ನೀಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬಿಡುಗಡೆ ! ಬೆಲೆ ಎಷ್ಟು?

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಡಿಸ್‌ಪ್ಲೇ

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 91.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 391ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಪ್ರೊಸೆಸರ್‌ ಯಾವುದು?

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದರೊಂದಿಗೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬಿಡುಗಡೆ ! ಬೆಲೆ ಎಷ್ಟು?

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಕ್ಯಾಮೆರಾ ಸೆಟ್‌ಅಪ್‌

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM6 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI ವಿಶ್ಯುಯಲ್‌ ಎಫೆಕ್ಟ್‌, ಸ್ಲೋ ಮೋಷನ್‌ ವಿಡಿಯೋ, ಡ್ಯುಯಲ್ ವ್ಯೂ ವಿಡಿಯೋ, HDR, ನೈಟ್‌ಸ್ಕೇಪ್, ಪೋಟ್ರೇಟ್ ಮೋಡ್ ಅನ್ನು ಹೊಂದಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬ್ಯಾಟರಿ ಸಾಮರ್ಥ್ಯ

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್‌ ವೂಕ್‌ ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, 3.5mm ಆಡಿಯೋ ಜಾಕ್, ಬ್ಲೂಟೂತ್ 5.1, GPS/ A-GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಇ-ದಿಕ್ಸೂಚಿ, ಆಂಬಿಯೆಂಟ್‌ ಲೈಟ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬಿಡುಗಡೆ ! ಬೆಲೆ ಎಷ್ಟು?

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM + 128GB ಸ್ಟೋರೇಜ್ ಆಯ್ಕೆಗೆ 19,999ರೂ. ಬೆಲೆ ಹೊಂದಿದೆ. ಇದರ 8GB RAM + 256GB ಆಯ್ಕೆಯು 21,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ನೀಲಿಬಣ್ಣದ ಲೈಮ್ ಮತ್ತು ಕ್ರೋಮ್ಯಾಟಿಕ್ ಗ್ರೇ ಬಣ್ಣ ಆಯ್ಕೆಗಳಲ್ಲಿ ಬರಲಿದೆ. ಇದನ್ನು ನೀವು ಏಪ್ರಿಲ್ 11 ರಿಂದ ಒನ್‌ಪ್ಲಸ್‌ ಆನ್‌ಲೈನ್ ಸ್ಟೋರ್, ಅಮೆಜಾನ್ ಇಂಡಿಯಾ ಮೂಲಕ ಖರೀದಿಸಬಹುದಾಗಿದೆ.

ಲಾಂಚ್‌ ಆಫರ್‌ ಏನಿರಲಿದೆ?

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ ಅನ್ನು ನೀವು ICICI ಕಾರ್ಡ್‌ಗಳು ಮತ್ತು EMI ಮೂಲಕ ಖರೀದಿಸಿದರೆ 1,000ರೂ. ಗಳ ತ್ವರಿತ ರಿಯಾಯಿತಿ ಸಿಗಲಿದೆ.

Best Mobiles in India

English summary
OnePlus Nord CE 3 Lite 5G powered by Snapdragon 695 SoC was launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+