Slim smartphones: ತುಂಬಾ ಹಗುರ ಇರುವ, ಹೆಚ್ಚಿನ ಸ್ಟೋರೇಜ್‌ನ ಸ್ಮಾರ್ಟ್‌ಫೋನ್‌ಗಳಿವು! ಅದೂ ಸಹ 20 ಸಾವಿರದೊಳಗೆ
ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಈಗ ಹಗುರವಾದ ಸ್ಮಾರ್ಟ್‌ಫೋನ್‌ಗಳಿಗೆ (slim smartphones) ಹೆಚ್ಚಿನ ಬೇಡಿಕೆ ಇದೆ. ಈಗಾಗಲೇ ಸಾಕಷ್ಟು ಕಂಪೆನಿಗಳು ಒಂದಕ್ಕೊಂದು ಪೈಪೋಟಿಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಹಗುರವಾದ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಈ ಮೂಲಕ ಬಳಕೆದಾರರಿಗೆ ವಿಶೇಷವಾದ ಅನುಭವ ನೀಡುತ್ತಿವೆ.
ಹೌದು, ಭಾರತದಲ್ಲಿ ಸಾಕಷ್ಟು ವಿಭಿನ್ನ ಫೀಚರ್ಸ್ ಹಾಗೂ ಶೈಲಿಯ ಫೋನ್‌ಗಳು ಲಭ್ಯ. ಈ ಲಿಸ್ಟ್‌ನಲ್ಲಿ ಸ್ಲಿಮ್ ಫೋನ್‌ಗಳು ಸಹ ಬಹಳ ಸದ್ದು ಮಾಡುತ್ತಿದ್ದು, ನೀವೇನಾದರೂ ಈ ಫೋನ್‌ಗಳನ್ನು ಖರೀದಿ ಮಾಡುವವರಿದ್ರೆ ಈ ಲೇಖನ ನಿಮಗೆ ಅನುಕೂಲ ಆಗಲಿದೆ. ಅದರಲ್ಲೂ ನಾವಿಲ್ಲಿ ತಿಳಿಸಿಕೊಟ್ಟಿರುವ ಹಗುರವಾದ ಫೋನ್‌ಗಳು 20,000 ರೂ.ಗಳ ಬೆಲೆಯೊಳಗೆ ಲಭ್ಯ ಇವೆ. ಹಾಗಿದ್ರೆ, ಈ ಬೆಲೆಯಲ್ಲಿ ಯಾವೆಲ್ಲಾ ಫೋನ್‌ಗಳು ಲಭ್ಯ?, ಫೀಚರ್ಸ್ ಏನು ಅನ್ನೋದನ್ನು ನೋಡೋಣ ಬನ್ನಿ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G: ಈ ಸ್ಮಾರ್ಟ್‌ಫೋನ್ (OnePlus Nord CE 3 Lite 5G) ಅನ್ನು ನೀವು 19,448ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ 6.72 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹಾಗೂ 120 Hz ರಿಫ್ರೆಶ್ ರೇಟ್ ಪಡೆದಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ಬಲ ಪಡೆದಿದ್ದು, 8 GB RAM, 128 GB ಇಂಟರ್ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡಿದೆ. ಅದರಂತೆ ಈ ಫೋನ್ 108 MP + 2 MP + 2 MP ಟ್ರಿಪಲ್ ರಿಯರ್ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಪಡೆದಿದೆ.
ಮೊಟೊರೊಲಾ ಮೊಟೊ G54 5G : ಈ ಫೋನ್ (Motorola Moto G54 5G) ಅನ್ನು ನೀವು ಕೇವಲ 15,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದು 6.5 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಡೈಮೆನ್ಸಿಟಿ 7020 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, 12 GB RAM, 256 GB ಇಂಟರ್ ಸ್ಟೋರೇಜ್ ಬಲ ಪಡೆದಿದೆ. ಇದರೊಂದಿಗೆ 50 MP + 8 MP ಡ್ಯುಯಲ್ ರಿಯರ್ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ಒಪ್ಪೋ A79 5G: ಈ ಫೋನ್ ಅನ್ನು (OPPO A79 5G) ನೀವು 19,799ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದು 6.72 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹಾಗೂ ಡೈಮೆನ್ಸಿಟಿ 6020 ಪ್ರೊಸೆಸರ್‌ನೊಂದಿಗೆ ಕಾಣಿಸಿಕೊಂಡಿದೆ. ಇದರೊಂದಿಗೆ 8 GB RAM, 128 GB ಇಂಟರ್ ಸ್ಟೋರೇಜ್ ಈ ಫೋನ್‌ನ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಗೆ ಮಾಡಲಿದೆ. ಜೊತೆಗೆ 50 MP + 2 MP ಡ್ಯುಯಲ್ ರಿಯರ್ ಹಾಗೂ 8 MP ಸೆಲ್ಫಿ ಕ್ಯಾಮೆರಾ ಈ ಫೋನ್‌ನಲ್ಲಿದೆ.
ಶಿಯೋಮಿ ರೆಡ್ಮಿ 12 5G: ಈ ಸ್ಮಾರ್ಟ್‌ಫೋನ್ (Xiaomi Redmi 12 5G ) ಅನ್ನು ನೀವು 14,999 ರೂ.ಗಳಿಗೆ ಖರೀದಿ ಮಾಡಬಹುದು. ಇದು 6.79 ಇಂಚಿನ ಪಂಚ್ ಹೋಲ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 8 GB RAM, 256 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಈ ಫೋನ್ ಪಡೆದಿದೆ. ಉಳಿದಂತೆ 50 MP + 2 MP ಡ್ಯುಯಲ್ ರಿಯರ್ ಹಾಗೂ 8 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G: ಈ ಫೋನ್ ಅನ್ನು (Samsung Galaxy M34 5G) ಅನ್ನು ನೀವು 16,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಎಕ್ಸಿನೋಸ್ 1280 ಪ್ರೊಸೆಸರ್ ಹಾಗೂ 6 GB RAM, 128 GB ಇಂಟರ್ ಸ್ಟೋರೇಜ್ ಮೂಲಕ ಉತ್ತಮ ಎನಿಸಿದೆ. ಹಾಗೆಯೇ 50 MP + 8 MP + 2 MP ಟ್ರಿಪಲ್ ರಿಯರ್ ಹಾಗೂ 13 MP ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಹೊಂದಿದೆ.
ರಿಯಲ್‌ಮಿ ನಾರ್ಜೋ 60 5G : ಈ ಸ್ಮಾರ್ಟ್‌ಫೋನ್ (Realme Narzo 60 5G) ಗೆ 15,749 ರೂ.ಗಳನ್ನು ಪಾವತಿ ಮಾಡುವ ಮೂಲಕ ನಿಮ್ಮದಾಗಿಸಿಕೊಳ್ಳಬಹುದು. ಇದು 6.43 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಡೈಮೆನ್ಸಿಟಿ 6020 ಪ್ರೊಸೆಸರ್ ಬಲ ಹಾಗೂ 8 GB RAM, 128 GB ಇಂಟರ್ ಸ್ಟೋರೇಜ್ ಆಯ್ಕೆ ಈ ಫೋನ್‌ನಲ್ಲಿ ಉತ್ತಮ ಕಾರ್ಯಕ್ಷಮತೆ ನೀಡಲಿದೆ. ಇದರೊಂದಿಗೆ 64 MP + 2 MP ಡ್ಯುಯಲ್ ರಿಯರ್ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ವಿವೋ T2x 5G : ಈ ಫೋನ್ (Vivo T2x 5G) ಗೆ 14,999 ರೂ.ಗಳನ್ನು ನಿಗದಿ ಮಾಡಲಾಗಿದೆ. ಈ ಫೋನ್ 6.58 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದಿದೆ. ಹಾಗೆಯೇ ಡೈಮೆನ್ಸಿಟಿ 6020 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8 GB RAM, 128 GB ಇಂಟರ್ ಸ್ಟೋರೇಜ್ ಮೂಲಕ ಬಳಕೆದಾರರಿಗೆ ಅತ್ಯುತ್ತಮ ಅನುಭವ ನೀಡಲಿದೆ. ಇದರೊಂದಿಗೆ 50 MP + 2 MP ಡ್ಯುಯಲ್ ರಿಯರ್ ಹಾಗೂ 8 MP ಸೆಲ್ಫಿ ಕ್ಯಾಮೆರಾ ಮೂಲಕ ಬಳಕೆದಾರರಿಗೆ ಇಷ್ಟವಾಗಲಿದೆ. ಉಳಿದಂತೆ ಈ ಫೋನ್ 18W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದೆ.


Click it and Unblock the Notifications








