Home
ಸುದ್ದಿಜಾಲ

ಈ ಒನ್‌ಪ್ಲಸ್‌ ಫೋನಿಗೆ ಇರುವ ಆಫರ್‌ ತಿಳಿದ್ರೆ, ನೀವು ವಾವ್‌ ಅನ್ನೋದು ಗ್ಯಾರಂಟಿ!

ಒನ್‌ಪ್ಲಸ್‌ ಸಂಸ್ಥೆಯು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನ ಪಡೆದಿದ್ದು, ಆ ಪೈಕಿ ಕೆಲವೊಂದು ಮಾಡೆಲ್‌ಗಳು ಹೆಚ್ಚು ಆಕರ್ಷಕ ಎನಿಸಿವೆ. ಈ ನಿಟ್ಟಿನಲ್ಲಿ ಒನ್‌ಪ್ಲಸ್‌ನ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಹಾಗೂ ಆಕರ್ಷಕ ಫೀಚರ್ಸ್ ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈಗ ಬೆಲೆ ಇಳಿಕೆಯಿಂದ ಮತ್ತೆ ಆಕರ್ಷಕ ಎನಿಸಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದ್ದು, ಇದರೊಂದಿಗೆ ಕೆಲವು ಆಯ್ದ ಬ್ಯಾಂಕ್‌ಗಳಿಂದಲೂ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ನ ಆಫರ್‌ ಬೆಲೆಯು 19,316ರೂ. ಆಗಿದೆ.

ಈ ಒನ್‌ಪ್ಲಸ್‌ ಫೋನಿಗೆ ಇರುವ ಆಫರ್‌ ತಿಳಿದ್ರೆ, ನೀವು ವಾವ್‌ ಅನ್ನೋದು ಗ್ಯಾರಂಟಿ!

ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಹ ಇದೆ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಒನ್‌ಪ್ಲಸ್‌ ಫೋನಿಗೆ ಇರುವ ಆಫರ್‌ ತಿಳಿದ್ರೆ, ನೀವು ವಾವ್‌ ಅನ್ನೋದು ಗ್ಯಾರಂಟಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಫೀಚರ್ಸ್‌ ಹೀಗಿವೆ

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಒಳಗೊಂಡಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 91.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 391ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ.

ಈ ಒನ್‌ಪ್ಲಸ್‌ ಫೋನಿಗೆ ಇರುವ ಆಫರ್‌ ತಿಳಿದ್ರೆ, ನೀವು ವಾವ್‌ ಅನ್ನೋದು ಗ್ಯಾರಂಟಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಪವರ್‌ ಪಡೆದಿದ್ದು, ಜೊತೆಗೆ ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದ್ದು, RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಅವಕಾಶ ನೀಡಲಾಗಿದೆ.

ಇನ್ನು ಈ ಫೋನ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI ವಿಶ್ಯುಯಲ್‌ ಎಫೆಕ್ಟ್‌, ಸ್ಲೋ ಮೋಷನ್‌ ವಿಡಿಯೋ, ಡ್ಯುಯಲ್ ವ್ಯೂ ವಿಡಿಯೋ, HDR, ನೈಟ್‌ಸ್ಕೇಪ್, ಪೋಟ್ರೇಟ್ ಮೋಡ್ ಅನ್ನು ಪಡೆದಿದೆ.

ಒನ್‌ಪ್ಲಸ್‌ನ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು 67W ಸೂಪರ್‌ ವೂಕ್‌ ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, 3.5mm ಆಡಿಯೋ ಜಾಕ್, ಬ್ಲೂಟೂತ್ 5.1, GPS/ A-GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಇ-ದಿಕ್ಸೂಚಿ, ಆಂಬಿಯೆಂಟ್‌ ಲೈಟ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಸಪೋರ್ಟ್ ಮಾಡುತ್ತದೆ.

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಮೊಬೈಲ್‌ 8GB RAM + 128GB ಸ್ಟೋರೇಜ್ ಹಾಗೂ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಮೊಬೈಲ್‌ ನೀಲಿಬಣ್ಣದ ಲೈಮ್ ಮತ್ತು ಕ್ರೋಮ್ಯಾಟಿಕ್ ಗ್ರೇ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
OnePlus Nord CE 3 Lite 5G receives awesome discount in flipkart. check out here offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+