ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ ನಾರ್ಡ್‌ CE 3 ಫೀಚರ್ಸ್‌ ಬಹಿರಂಗ! ಡಿಸೈನ್‌ ಹೇಗಿರಲಿದೆ?

|

ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್‌ ಇದೆ. ಇದಕ್ಕೆ ತಕ್ಕಂತೆ ಭಾರತದ ಮಾರುಕಟ್ಟೆಯಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒನ್‌ಪ್ಲಸ್‌ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ತನ್ನ ಭಿನ್ನ ಮಾದರಿಯ ಡಿಸೈನ್‌ ಹಾಗೂ ಆಕರ್ಷಕ ಕ್ಯಾಮೆರಾ ಮಾಡ್ಯೂಲ್‌ಗಳಿಂದ ಒನ್‌ಪ್ಲಸ್‌ ಫೋನ್‌ಗಳು ಗಮನಸೆಳೆದಿವೆ. ಇದೀಗ ತನ್ನ ಮುಂದಿನ ಸ್ಮಾರ್ಟ್‌ಫೋನ್‌ ಒನ್‌ಪ್ಲಸ್‌ ನಾರ್ಡ್‌ CE 3 ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ ನಾರ್ಡ್‌ CE 3 ಫೀಚರ್ಸ್‌ ಬಹಿರಂಗ!

ಹೌದು, ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಹಲವು ಕಾರಣಗಳಿಗಾಗಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಸ್ಮಾರ್ಟ್‌ಫೋನ್‌ ಡಿಸೈನ್‌ ಹಾಗೂ ಪ್ರೊಸೆಸರ್‌ ಕಾರ್ಯಕ್ಷಮತೆ ಹೇಗಿರಲಿದೆ ಅನ್ನೊ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಅದರಂತೆ ಇದೀಗ ಈ ಫೋನ್‌ನ ಫೀಚರ್ಸ್‌ ಬಹಿರಂಗವಾಗಿದ್ದು, ಭಾರಿ ಸದ್ದು ಮಾಡ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿರಲಿದೆ ಅನ್ನೊದು ಪ್ರಮುಖ ಹೈಲೈಟ್‌ ಆಗಿದೆ. ಇನ್ನುಳಿದಂತೆ ಈ ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಬಹುದು?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆಯುವ ಸಾಧ್ಯತೆಯಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ ನಾರ್ಡ್‌ CE 3 ಫೀಚರ್ಸ್‌ ಬಹಿರಂಗ!

ಪ್ರೊಸೆಸರ್‌ ಸಾಮರ್ಥ್ಯದ ಬಗ್ಗೆ ನಿರೀಕ್ಷೆ ಏನು?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆಯಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸ್ಟೋರೇಜ್‌ ಸಾಮರ್ಥ್ಯ ವಿಸ್ತರಿಸುವ ಆಯ್ಕೆಯನ್ನು ಸಹ ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಹೊಂದಿರಬಹುದು ಎಂಬ ನಿರೀಕ್ಷೆಯಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನಿರೀಕ್ಷಿಸಲಾಗಿದೆ.

ಬಿಡುಗಡೆಗೂ ಮುನ್ನವೇ ಒನ್‌ಪ್ಲಸ್‌ ನಾರ್ಡ್‌ CE 3 ಫೀಚರ್ಸ್‌ ಬಹಿರಂಗ!

ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 5G, ಫಿಂಗರ್‌ಪ್ರಿಂಟ್ ಸ್ಕ್ಯಾನರ್, NFC ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್‌ನ ನಿಖರವಾದ ಬೆಲೆ ಇನ್ನು ಬಹಿರಂಗವಾಗಿಲ್ಲ. ಆದರೆ ಇದು ಭಾರತದಲ್ಲಿ 25,000 ಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಆದರೆ ಪ್ರಸ್ತುತ ಒನ್‌ಪ್ಲಸ್‌ ಕಂಪೆನಿ ಭಾರತದಲ್ಲಿ ಒನ್‌ಪ್ಲಸ್‌ 11 ಅನ್ನು ಫೆಬ್ರವರಿ 7 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಆದರಿಂದ ಒನ್‌ಪ್ಲಸ್‌ ನಾರ್ಡ್‌ CE 3 ಫೋನ್‌ ಬಿಡುಗಡೆ ಇನ್ನಷ್ಟು ತಡವಾಗುವ ಸಾದ್ಯತೆ ಕೂಡ ಇದೆ.

Best Mobiles in India

English summary
OnePlus Nord CE 3 Smartphone specifications leaked know more details in kannada

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X