ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಖರೀದಿಸುವುದು ಬೇಡ ಅಂತೀರಾ? ಹಾಗಿದ್ರೆ, ಇಲ್ಲಿ ಗಮನಿಸಿ!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿರುವ ಒನ್‌ಪ್ಲಸ್ (OnePlus) ಭಾರತದಲ್ಲಿ ಹೊಸದಾಗಿ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G (OnePlus Nord CE 4 Lite 5G) ಫೋನ್ ಅನ್ನು ಬಿಡುಗಡೆ ಮಾಡಿದ್ದು, ಮಾರುಕಟ್ಟೆಯಲ್ಲಿ ಸಖತ್ ಗಮನ ಸೆಳೆದಿದೆ. ಸಂಸ್ಥೆಯು ಹೊಸ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನಿಗೆ ಸಮಾನವಾದ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.
ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ದರದ ಫೋನ್‌ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ಈ ನಿಟ್ಟಿನಲ್ಲಿ ಕಂಪನಿಗಳು ಕೂಡಾ ಈ ವಿಭಾಗದಲ್ಲಿ ಅತ್ಯುತ್ತಮ ಫೋನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಈ ಸಾಲಿಗೆ ಒನ್‌ಪ್ಲಸ್‌ನ ಹೊಸ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಕೂಡಾ ಸೇರ್ಪಡೆ ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ಪೈಪೋಟಿ ನೀಡುವ ಇತರೆ ಪರ್ಯಾಯ ಫೋನ್‌ಗಳು ಆಯ್ಕೆ ಸಹ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G
ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಸಹ ಪಡೆದಿದೆ. ಇನ್ನು ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ.
ಅಲ್ಲದೇ ಈ ಫೋನ್ ಹಿಂಭಾಗದಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಒದಗಿಸಿದ್ದು, ಇದಕ್ಕೆ ಅನುಗುಣವಾಗಿ 67W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ.
ವಿವೋ T3 5G
ವಿವೋ T3 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ.
ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಕುಡಾ ಇದೆ.
ರೆಡ್ಮಿ ನೋಟ್ 13 5G
ರೆಡ್ಮಿ ನೋಟ್ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 × 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ.
ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಅನುಗುಣವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.


Click it and Unblock the Notifications








