ಶೀಘ್ರದಲ್ಲೇ ಬರಲಿದೆ ಒನ್‌ಪ್ಲಸ್ ನಾರ್ಡ್ CE 4 ಫೋನ್: ಫೀಚರ್ಸ್ ನಿರೀಕ್ಷೆ ಏನಿದೆ
ಒನ್‌ಪ್ಲಸ್ ನಾರ್ಡ್ CE 4 5G ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದ್ದು, ಇದೀಗ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 1 ರಂದು ಸಂಜೆ 6:30 ಕ್ಕೆ ಬಿಡುಗಡೆ ಆಗುವುದು ಪಕ್ಕಾ ಆಗಿದೆ.
ಹೌದು, ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ ನಾರ್ಡ್ CE 4 ಫೀಚರ್ಸ್ ನಿರೀಕ್ಷೆ ಏನು?
ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ 6.73 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇಯು 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇಯು 393 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರಲಿದ್ದು, ಆಂಬಿಯೆಂಟ್ ಡಿಸ್‌ಪ್ಲೇ, ಡಾರ್ಕ್ ಮೋಡ್, AI ಕಲರ್ ವರ್ಧನೆ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ CE 4 ಪ್ರೊಸೆಸರ್ ಯಾವುದು?
ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen3 SoC ಪ್ರೊಸೆಸರ್ ಹೊಂದಿರಲಿದೆ. ಇದು ಆಂಡ್ರಾಯ್ಡ್ v14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಡೆಡಿಕೇಟೆಡ್ ಮೆಮೊರಿ ಕಾರ್ಡ್ ಸ್ಲಾಟ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಪಡೆದಿರಲಿದೆ.
ಒನ್‌ಪ್ಲಸ್ ನಾರ್ಡ್ CE 4 ಕ್ಯಾಮೆರಾ ಸೆಟಪ್ ಏನಿದೆ?
ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎನ್ನಲಾಗಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಒನ್‌ಪ್ಲಸ್ ನಾರ್ಡ್ CE 4 ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ವೋಕ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಬೆಂಬಲದೊಂದಿಗೆ ಬರಲಿದೆ.
ಒನ್‌ಪ್ಲಸ್ ನಾರ್ಡ್ CE 4 ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ ನಾರ್ಡ್ CE 4 ಸ್ಮಾರ್ಟ್‌ಫೋನ್ ಭಾರತದಲ್ಲಿ ಏಪ್ರಿಲ್ 1 ರಂದು ಸಂಜೆ 6:30 ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್ ಮತ್ತು ಅಮೆಜಾನ್ ಇಂಡಿಯಾದಲ್ಲಿ ಮೀಸಲಾದ ಮೈಕ್ರೋಸೈಟ್‌ಗಳು ಹ್ಯಾಂಡ್‌ಸೆಟ್‌ನ ಲಾಂಚ್‌ಗೆ ಮುಂಚಿತವಾಗಿ ವಿನ್ಯಾಸವನ್ನು ಬಹಿರಂಗ ಪಡಿಸಿದೆ. ಆಸಕ್ತ ಗ್ರಾಹಕರು ಬಿಡುಗಡೆಯ ಕುರಿತು ಇತ್ತೀಚಿನ ನವೀಕರಣಗಳನ್ನು ಪಡೆಯಲು ವೆಬ್‌ಸೈಟ್‌ಗಳಲ್ಲಿ "ನೋಟಿಫೈ ಮಿ" ಬಟನ್ ಅನ್ನು ಕ್ಲಿಕ್ ಮಾಡಬಹುದು. ಈ ಫೋನ್ ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ.


Click it and Unblock the Notifications








