ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ ಅನಾವರಣ!..ಫೀಚರ್ಸ್‌ ಹೇಗಿದೆ?

|

ಟೆಕ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದೆ. ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ತನ್ನ ಹೊಸ ಒನ್‌ಪ್ಲಸ್‌ ನಾರ್ಡ್‌ N20 SE ಅನ್ನು ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ 12 ಆಧಾರಿತ OxygenOS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ಹೊಸ ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ ಡ್ಯುಯಲ್ ಸ್ಪೀಕರ್‌ಗಳನ್ನು ಕೂಡ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಸೂಪರ್‌ವೂಕ್‌ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಒನ್‌ಪ್ಲಸ್‌

ಇನ್ನು ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ 2D ಸ್ಲಿಮ್ ಬಾಡಿಯನ್ನು ಹೊಂದಿದೆ. ಇದು 6.56-ಇಂಚಿನ ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು TDRA ಪ್ರಮಾಣೀಕರಣ ವೆಬ್‌ಸೈಟ್‌ನಲ್ಲಿ CPH2469 ಮಾದರಿ ಸಂಖ್ಯೆಯೊಂದಿಗೆ ಗುರುತಿಸಲಾಗಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಚೀನಾ ಮಾರುಕಟ್ಟೆಯಲ್ಲಿ ಆಲಿಎಕ್ಸ್‌ಪ್ರೆಸ್‌ನಲ್ಲಿ ಪಟ್ಟಿಮಾಡಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಆಗಸ್ಟ್ 8 ರಂದು ಸೇಲ್‌ ಆಗುವ ನಿರೀಕ್ಷೆಯಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 267 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 90 Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದರ ಸ್ಕ್ರೀನ್ ಟು ಬಾಡಿ ರೇಶಿಯೊ 90.1% ರಷ್ಟಿದೆ. ಇದು D ಸ್ಲಿಮ್ ಬಾಡಿಯನ್ನು ಹೊಂದಿದೆ.

ಪ್ರೊಸೆಸರ್‌ ಬಲವೇನು?

ಪ್ರೊಸೆಸರ್‌ ಬಲವೇನು?

ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G35SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12-ಆಧಾರಿತ ಆಕ್ಸಿಜನ್‌OS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ ಎನ್ನಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಕ್ಯಾಮೆರಾ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲ್ಯಾಶ್‌, ಫೇಸ್‌ ಡಿಟೆಕ್ಷನ್‌, ಟಚ್‌ ಟು ಫೋಕಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ನೀವು ಸುಮಾರು 30 ನಿಮಿಷಗಳಲ್ಲಿ 50% ವರೆಗೆ ಬ್ಯಾಟರಿಯನ್ನು ಚಾರ್ಜ್ ಮಾಡಲು ಸಾಧ್ಯವಾಗಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್‌ ನಾರ್ಡ್‌ N20 SE ಸ್ಮಾರ್ಟ್‌ಫೋನ್‌ ಬೆಲೆ ಚೀನಾದಲ್ಲಿ $199 (ಅಂದಾಜು 15,800ರೂ)ಬೆಲೆಗೆ ನಿಗದಿಪಡಿಸಲಾಗಿದೆ. ಇದು ಚೀನಾದಲ್ಲಿ ಆಗಸ್ಟ್ 8 ರಂದು ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್‌ ಬ್ಲೂ ಓಯಸಿಸ್ ಮತ್ತು ಸೆಲೆಸ್ಟಿಯಲ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

ಒನ್‌ಪ್ಲಸ್‌

ಇದಲ್ಲದೆ ಒನ್‌ಪ್ಲಸ್‌ ಕಂಪೆನಿ ಭಾರತದಲ್ಲಿ ಇದೇ ಆಗಸ್ಟ್‌ 3 ರಂದು ತನ್ನ ಹೊಸ ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2,412x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬಲವನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಮೊದಲ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ ಆಗಿದೆ. ಇದು ಆಕ್ಸಿಜನ್ OS 12.1 ಜೊತೆಗೆ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಈ ವರ್ಷದ ಅಂತ್ಯದ ವೇಳೆಗೆ ಈ ಫೋನ್‌ OxygenOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಡ್ಯುಯಲ್ LED ಫ್ಲ್ಯಾಷ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದ್ದು, ಇದು 119.9 ಡಿಗ್ರಿಗಳ ಫೀಲ್ಡ್‌-ವ್ಯೂನೊಂದಿಗೆ f/2.2 ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.

ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಚಾರ್ಜರ್ ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

Best Mobiles in India

English summary
OnePlus Nord N20 SE With 5,000mAh Launched: Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X