ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಭಾರತದ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಕಂಪೆನಿಗಳಲ್ಲಿ ಒನ್‌ಪ್ಲಸ್ ಕೂಡ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಒನ್‌ಪ್ಲಸ್ N100 ಸ್ಮಾರ್ಟ್‌ಫೋನ್‌ನ ಉತ್ತರಾಧಿಕಾರಿಯಾಗಿದೆ.

ಹೌದು, ಒನ್‌ಪ್ಲಸ್ ಕಂಪೆನಿ ಹೊಸ ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 90Hz ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್. ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ 1080 × 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.49-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 405ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್, 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಸಹ ಪಡೆದಿದೆ.

ಟ್ರಿಪಲ್ ಕ್ಯಾಮೆರಾ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಏಕವರ್ಣದ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸಿಂಗಲ್ ಚಾರ್ಜ್‌ನಲ್ಲಿ ಫೋನ್ ಕನಿಷ್ಠ ಒಂದು ಪೂರ್ಣ ದಿನದವರೆಗೆ ಇರುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ ನಾರ್ಡ್ N200 5G ಸ್ಮಾರ್ಟ್‌ಫೋನ್ ಏಕೈಕ 4GB RAM + 64GB ಶೇಖರಣಾ ರೂಪಾಂತರದ ಆಯ್ಕೆಗೆ ಯುಎಸ್‌ನಲ್ಲಿ $239.99 (ಅಂದಾಜು 17,600 ರೂ.) ಗೆ ನಿಗದಿಪಡಿಸಲಾಗಿದೆ. ಇದೇ ಸಂರಚನೆಯನ್ನು ಕೆನಡಾದಲ್ಲಿ ಸಿಎಡಿ 319.99 (ಸುಮಾರು 19,300ರೂ.) ನಲ್ಲಿ ಪ್ರಾರಂಭಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲೂ ಕ್ವಾಂಟಮ್ ಕಲರ್ ಆಯ್ಕೆಯಲ್ಲಿ ಬರುತ್ತದೆ. ಜೂನ್ 25 ರಿಂದ ಯುಎಸ್ ಮತ್ತು ಕೆನಡಾ ಎರಡರಲ್ಲೂ ಒನ್‌ಪ್ಲಸ್.ಕಾಮ್ ಸೈಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ.


Click it and Unblock the Notifications




