oneplus: ಒನ್‌ಪ್ಲಸ್‌ನಿಂದ ಹೊಸ ಸ್ಮಾರ್ಟ್‌ಫೋನ್ ಲಾಂಚ್! 108 ಮೆಗಾಪಿಕ್ಸೆಲ್ ಕ್ಯಾಮೆರಾ ವಿಶೇಷ!
ಒನ್‌ಪ್ಲಸ್ ಕಂಪೆನಿ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿಯೂ ಸಹ ವಿವಿಧ ಮಾದರಿಯ ಫೋನ್‌ಗಳ ಮೂಲಕ ಒನ್‌ಪ್ಲಸ್ (OnePlus ) ಕಂಪೆನಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ.
ಹೌದು, ಒನ್‌ಪ್ಲಸ್ ಕಂಪೆನಿ ಹೊಸ ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ ನಾರ್ಡ್ N30 5G ಡಿಸ್‌ಪ್ಲೇ ವಿವರ: ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್, 391 ppi ಅನುಪಾತದ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ ಡಿಸ್‌ಪ್ಲೇ P3 ಮತ್ತು ಡಾರ್ಕ್ ಮೋಡ್ ಅನ್ನು ಸಹ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ N30 5G ಪ್ರೊಸೆಸರ್ ಯಾವುದು: ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒನ್‌ಪ್ಲಸ್ ನಾರ್ಡ್ N30 5G ಕ್ಯಾಮೆರಾ ಸೆಟ್‌ಅಪ್: ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5KHM6SX03 ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಒನ್‌ಪ್ಲಸ್ ನಾರ್ಡ್ N30 5G ಬ್ಯಾಟರಿ ಬ್ಯಾಕ್‌ಅಪ್ ವಿವರ: ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 50W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, GPS, WiFi 802.11 a/b/g/n/ac, ಮತ್ತು ಬ್ಲೂಟೂತ್ v5.1 ಬೆಂಬಲಿಸಲಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಒನ್‌ಪ್ಲಸ್ ನಾರ್ಡ್ N30 5G ಬೆಲೆ ಮತ್ತು ಲಭ್ಯತೆ
ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ 8GB + 128GB ರೂಪಾಂತರದ ಆಯ್ಕೆಗೆ $299.99 (ಸುಮಾರು 24,800ರೂ)ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ರೊಮ್ಯಾಟಿಕ್ ಗ್ರೇ ಬಣ್ಣದ ಆಯ್ಕೆಯಲ್ಲಿ ಮಾತ್ರ ನೀಡಲಾಗುತ್ತದೆ. ಇದು ಪ್ರಸ್ತುತ ಕಂಪನಿಯ US ಸೈಟ್‌ನಲ್ಲಿ ಪ್ರಿ ಬುಕ್ಕಿಂಗ್ ಆರ್ಡರ್‌ಗೆ ಲಬ್ಯವಿದೆ. ಮುಂಗಡ-ಆರ್ಡರ್‌ಗಳಿಗಾಗಿ ತೆರೆದಿರುತ್ತದೆ.
ಇನ್ನು ಒನ್‌ಪ್ಲಸ್ ಕಂಪೆನಿ ಈ ಸ್ಮಾರ್ಟ್‌ಫೋನ್ ಅನ್ನು ಪ್ರಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ $59 (ಸುಮಾರು 4,900ರೂ) ಮೌಲ್ಯದ ಒನ್‌ಪ್ಲಸ್ ನಾರ್ಡ್ ಬಡ್ಸ್ 2 ಅನ್ನು ಉಚಿತವಾಗಿ ನೀಡುತ್ತಿದೆ. ಈ ಸ್ಮಾರ್ಟ್‌ಫೋನ್‌ನ ಮೊದಲ ಶಿಪ್ಪಿಂಗ್ ಜೂನ್ 8 ರಿಂದ ಪ್ರಾರಂಭವಾಗಲಿದೆ.


Click it and Unblock the Notifications








