ಒನ್‌ಪ್ಲಸ್ ಓಣಂ ಆಫರ್: ಈ ಮೂರು ಒನ್‌ಪ್ಲಸ್ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!
ಈ ವರ್ಷದ ಓಣಂ ಸಂಭ್ರಮದ ಪ್ರಯುಕ್ತ ಒನ್‌ಪ್ಲಸ್ ಮೊಬೈಲ್ ಸಂಸ್ಥೆಯು ತನ್ನ ಇತ್ತೀಚಿನ ಕೆಲವು ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ತಿಳಿಸಿದೆ. ಮುಖ್ಯವಾಗಿ ಸ್ಮಾರ್ಟ್‌ರ್ಫೋನ್‌ಗಳು, ಟ್ಯಾಬ್ಲೆಟ್‌ಗಳು, ಇಯರ್‌ಬಡ್‌ಗಳು ಮತ್ತು ಟಿವಿಗಳಿಗೂ ಸಖತ್ ಡೀಲ್‌ಗಳನ್ನು ನೀಡುತ್ತಿದೆ. ಈ ಮೂಲಕ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.
ಹೌದು, ಒನ್‌ಪ್ಲಸ್ ಸಂಸ್ಥೆಯು ಓಣಂ (Onam) ಹಬ್ಬದ ಅಂಗವಾಗಿ ಭಾರೀ ರಿಯಾಯಿತಿ ಲಭ್ಯ ಮಾಡಿದೆ. ಈ ಡಿಸ್ಕೌಂಟ್ ಮೇಳದಲ್ಲಿ ಸಂಸ್ಥೆಯ ಇತ್ತೀಚಿನ ಕೆಲವು ನೂತನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಬೆಲೆ ಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಬೊಂಬಾಟ್ ರಿಯಾಯಿತಿ ಪಡೆದ ಕೆಲವು ಒನ್‌ಪ್ಲಸ್ ಫೋನ್ ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್ 11 5G ಆಫರ್ :
ಒನ್‌ಪ್ಲಸ್ 11 5G ಮೊಬೈಲ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,440x3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಕೆಲಸ ನಿರ್ವಹಿಸುತ್ತದೆ.
ಹಾಗೆಯೇ 16GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಒನ್‌ಪ್ಲಸ್ ನಾರ್ಡ್ 3 ಆಫರ್ :
ಒನ್‌ಪ್ಲಸ್ ನಾರ್ಡ್ 3 ಮೊಬೈಲ್ 6.74 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇದು ಡಿಸ್‌ಪ್ಲೇ 40Hz - 120Hz ಮತ್ತು 450ppi ಪಿಕ್ಸೆಲ್ ಸಾಂದ್ರತೆಯ ನಡುವೆ ಬದಲಾಯಿಸುವ ಸಾಮರ್ಥ್ಯವನ್ನು ಪಡೆದಿರುವ ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಅಲ್ಲದೇ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದೆ.
ಇನ್ನು ಈ ಫೋನ್ ಆಂಡ್ರಾಯ್ಡ್ 13 ಓಎಸ್ ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ 16GB RAM ಮತ್ತು 256GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 80W SuperVOOC ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಒನ್‌ಪ್ಲಸ್ 11R ಆಫರ್ :
ಒನ್‌ಪ್ಲಸ್ 11R ಮೊಬೈಲ್ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದು 2772 x 1240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, ಇದು 1,450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.
ಒನ್‌ಪ್ಲಸ್ 11R ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಜತೆಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 8GB RAM+256GB ಹಾಗೂ 18GB RAM ಮತ್ತು 256GB ವೇರಿಯೆಂಟ್ ಆಯ್ಕೆಯ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಹೊಂದಿದೆ.


Click it and Unblock the Notifications








