ಇಂದು OnePlus ಸಂಸ್ಥೆಯ ಈ ದೈತ್ಯ ಫೋನ್ ಖರೀದಿಗೆ ಲಭ್ಯ; ಭರ್ಜರಿ ಡಿಸ್ಕೌಂಟ್ ಇದೆ!
ಒನ್‌ಪ್ಲಸ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಲಾಂಚ್ ಮಾಡಿರುವ ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ (OnePlus Open Apex Edition) ಸ್ಮಾರ್ಟ್‌ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್ ಗಳಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 10) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಕ್ಕೆ ಮೊದಲ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಫೋಲ್ಡೆಬಲ್ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದುಕೊಂಡಿದೆ.
ಹೌದು, ಒನ್‌ಪ್ಲಸ್ ಸಂಸ್ಥೆಯ ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನ್ ಮಾರಾಟ ಇಂದು ಇ ಕಾಮರ್ಸ್ ದೈತ್ಯ ಅಮೆಜಾನ್ನಲ್ಲಿ ನಡೆಯಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ.

ಹಾಗೆಯೇ ಈ ಫೋನ್ 4,800 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಇದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 1,39,999 ರೂ. ಆಗಿದೆ. ಹಾಗಾದರೇ ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನಿನ ಬೆಲೆ ಎಷ್ಟು? ಹಾಗೂ ಈ ಫೋನಿನ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಫೀಚರ್ಸ್
ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 720Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಜೊತೆಗೆ 2.5D ಕರ್ವ್ಡ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದೆ.
ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 12GB RAM + 512 GB ಹಾಗೂ 16GB RAM + 1 TB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX355 ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇದ್ದು, ಅವುಗಳು ಕ್ರಮವಾಗಿ 32 ಮೆಗಾ ಪಿಕ್ಸೆಲ್ ಹಾಗೂ 20 ಮೆಗಾ ಪಿಕ್ಸಲ್ ಆಗಿವೆ.
ಒನ್‌ಪ್ಲಸ್ ಓಪೆನ್ ಅಪೆಕ್ಸ್ ಎಡಿಷನ್ ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಹೊಂದಿದ್ದು, 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ.


Click it and Unblock the Notifications








