ಒನ್‌ಪ್ಲಸ್ ನಾರ್ಡ್ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ ಬಹಿರಂಗ !

|

ಒನ್‌ಪ್ಲಸ್‌ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಒನ್‌ಪ್ಲಸ್‌ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಜುಲೈ 21 ರಂದು ಒನ್‌ಪ್ಲಸ್ ನಾರ್ಡ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಇದು ಹೊಸ ಮಾದರಿಯ ವಿನ್ಯಾಸ ಒಳಗೊಂಡಿರುವ ಸ್ಮಾರ್ಟ್‌ಫೊನ್‌ ಎನ್ನಲಾಗ್ತಿದ್ದು, ಬಿಡುಗಡೆಗೂ ಮುನ್ನವೇ ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಸದ್ಯ ಇದೀಗ ಒನ್‌ಪ್ಲಸ್‌ ಬ್ರಾಂಡ್ ತನ್ನ ಒನ್‌ಪ್ಲಸ್‌ ನಾರ್ಡ್‌ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ಸ್‌ಗಳೇನು ಅನ್ನೊದನ್ನ ಬಹಿರಂಗಪಡಿಸಿದೆ.

ಒನ್‌ಪ್ಲಸ್‌

ಹೌದು, ಒನ್‌ಪ್ಲಸ್‌ ಕಂಪೆನಿ ತನ್ನ ಒನ್‌ಪ್ಲಸ್ ನಾರ್ಡ್ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ಸ್‌ಗಳೇನು ಅನ್ನೊದನ್ನ ಬಹಿರಂಗ ಪಡಿಸಿದೆ. ಸದ್ಯ ಕಂಪೆನಿ ಹೇಳಿಕೊಂಡಿರುವ ಮಾಹಿತಿ ಪ್ರಕಾರ ಇದು ಒಟ್ಟು ಆರು ಕ್ಯಾಮೆರಾಗಳನ್ನ ಒಳಗೊಂಡಿರಲಿದೆ ಎಂಬುದು ಖಚಿತವಾಗಿದೆ. ಇದರ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಕ್ವಾಡ್‌ ಕ್ಯಾಮರಾ ಸೆಟ್‌ಅಪ್‌ ಹೊಂದಿದ್ದು, ಮುಂಭಾಗದಲ್ಲಿ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾಗಳನ್ನ ನೀಡಲಾಗಿದೆ. ಸದ್ಯ ಲಬ್ಯವಾಗಿರುವ ಮಾಹಿತಿ ಪ್ರಕಾರ ಒನ್‌ಪ್ಲಸ್‌ ನಾರ್ಡ್‌ ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್

ಸದ್ಯ ಬಿಡುಗಡೆಗೆ ಸಿದ್ದವಾಗಿರುವ ಒನ್‌ಪ್ಲಸ್ ನಾರ್ಡ್‌ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX586 ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿರುತ್ತದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೆ ಈ ಸೆಟಪ್ OIS ಬೆಂಬಲದೊಂದಿಗೆ ಬರುತ್ತದೆ. ಇದಲ್ಲದೆ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬಳಕೆದಾರರಿಗೆ ಉತ್ತಮ ಅನುಭವವನ್ನು ನೀಡಲು ಕೆಲವು ಸಾಫ್ಟ್‌ವೇರ್ ಅನ್ನು ಉತ್ತಮಗೊಳಿಸಿದ್ದೇವೆ ಎಂದು ಒನ್‌ಪ್ಲಸ್ ಸಂಸ್ಥೆ ಹೇಳಿದೆ.

ಒನ್‌ಪ್ಲಸ್

ಇನ್ನು ಒನ್‌ಪ್ಲಸ್ ನಾರ್ಡ್‌ ಸ್ಮಾರ್ಟ್‌ಫೋನ್‌ ನಲ್ಲಿ ಮುಖ್ಯ ಕ್ಯಾಮೆರಾ ಸೆನ್ಸಾರ್‌ ಅನ್ನು ಆಯ್ಕೆ ಮಾಡುವುದು ಸುಲಭವಾಗಿದ್ದು,ಸೋನಿ IMX586 ಸೆನ್ಸಾರ್‌ ಅನ್ನು ಹೊಮದಿಸಲಾಗಿದೆ ಎಂದು ಕಂಪೆನಿ ಹೇಳಿದೆ. ಇದಲ್ಲದೆ ಇದರಲ್ಲಿ f / 1.75 ಲೆನ್ಸ್‌ ಮತ್ತು OIS ಹಾರ್ಡ್‌ವೇರ್ ಅದ್ಭುತವಾಗಿದೆ. ಜೊತೆಗೆ ಹಲವಾರು ಶ್ರೇಣಿಯ ಸಾಫ್ಟ್‌ವೇರ್ ವರ್ಧನೆಗಳನ್ನು ಅಭಿವೃದ್ಧಿಪಡಿಸಿದ್ದೇವೆ, ಇದು ಅದರ ಇಮೇಜ್ ಪ್ರೊಸೆಸಿಂಗ್ ಅನ್ನು ಹಲವಾರು ಸನ್ನಿವೇಶಗಳಲ್ಲಿ ಉತ್ತಮವಾಗಿಸುತ್ತದೆ ಎಂದು ಒನ್‌ಪ್ಲಸ್ ಹೇಳಿಕೊಂಡಿದೆ.

ಒನ್‌ಪ್ಲಸ್

ಇದಲ್ಲದೆ ಒನ್‌ಪ್ಲಸ್ ನಾರ್ಡ್ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಪ್ರೈಮರಿ ಸೆಲ್ಫಿ ಕ್ಯಾಮೆರಾವನ್ನು ಪ್ಯಾಕ್ ಮಾಡಲು ಅಧಿಕೃತವಾಗಿ ದೃಪಡಿಸಲಾಗಿದೆ. ಅಲ್ಲದೆ 105 ಡಿಗ್ರಿ ಕ್ಷೇತ್ರದ ವೀಕ್ಷಣೆಯೊಂದಿಗೆ ಹೆಚ್ಚುವರಿ ಅಲ್ಟ್ರಾ-ವೈಡ್-ಕೋನದಿಂದ ಇದು ಸಹಾಯ ಮಾಡುತ್ತದೆ ಎಂದಿದೆ. ಇನ್ನು ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್ ಒಳಗೊಂಡಿರುವ ಒನ್‌ಪ್ಲಸ್‌ ಕಂಪೆನಿಯ ಮೊದಲ ಫೋನ್ ಇದಾಗಿದೆ. ಅಲ್ಲದೆ, ಒನ್‌ಪ್ಲಸ್ ನಾರ್ಡ್ ಅಮೋಲೆಡ್ ಡಿಸ್ಪ್ಲೇ ಮತ್ತು ಸ್ನಾಪ್‌ಡ್ರಾಗನ್ 765 ಜಿ ಚಿಪ್‌ಸೆಟ್‌ನೊಂದಿಗೆ ಬಿಡುಗಡೆ ಮಾಡುವುದನ್ನು ಖಚಿತಪಡಿಸಲಾಗಿದೆ.

Most Read Articles
Best Mobiles in India

English summary
The OnePlus Nord is officially confirmed to launch with a total of six cameras on July 21. It will have four cameras on the backside and two sensors on the front.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X