Home
ಸುದ್ದಿಜಾಲ

ಒನ್‌ಪ್ಲಸ್‌ 'Z' ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಚೀನಾ ಮೂಲದ ಒನ್‌ಪ್ಲಸ್‌ ಸಂಸ್ಥೆಯ ಈಗಾಗಲೇ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಇನ್ನು ಈಗಾಗಲೇ ಕೆಲ ತಿಂಗಳುಗಳ ಹಿಂದೆ ತನ್ನ ಬಹುನಿರೀಕ್ಷಿತ ಒನ್‌ಪ್ಲಸ್‌ 8 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿತ್ತು. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಮಾದರಿಯ ನೆಕ್ಸ್ಟ್ ಜನರೇಶನ್ ಫೋನ್ ಅನ್ನು ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಿದೆ.

ಹೌದು

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ಸಂಸ್ಥೆ ಒನ್‌ಪ್ಲಸ್‌ ತನ್ನ ಒನ್‌ಪ್ಲಸ್‌ Z ಸ್ಮಾರ್ಟ್‌ಫೋನ್‌ ಅಥವಾ ಒನ್‌ಪ್ಲಸ್‌ 8 ಲೈಟ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈಗಾಗಲೇ ಇಡೀ ಜಗತ್ತು ಕೊರೊನಾ ವೈರಸ್‌ ಎಫೆಕ್ಟ್‌ನಿಂದಾಗಿ ಲಾಕ್‌ಡೌನ್‌ನಲ್ಲಿ, ಈ ಕಾರಣಕ್ಕಾಗಿ ಒನ್‌ಪ್ಲಸ್‌ ಸಂಸ್ಥೆಯು ಆನ್‌ಲೈನ್‌ ಲೈವ್ ಕಾರ್ಯಕ್ರಮದ ಮೂಲಕ ಈ ಸ್ಮಾರ್ಟ್‌ಫೋ ನ್‌ ಅನ್ನು ಅನಾವರಣ ಮಾಡುವ ಸಾಧ್ಯತೆ ಇದೆ. ಇನ್ನು ಈ ಫೋನ್‌ ಒನ್‌ಪ್ಲಸ್‌ 7 ಸರಣಿಗಿಂತ ಸಾಕಷ್ಟು ಅಪ್‌ಡೇಟ್ ಆಗಿದ್ದು, ಸೂಪರ್ AMOLED ಡಿಸ್‌ಪ್ಲೇ, ಹೊಂದಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಹೊಸ ಟಾಪ್-ಎಂಡ್ ಮತ್ತು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು 90Hz ಅಥವಾ 120Hz ಡಿಸ್‌ಪ್ಲೇಗಳೊಂದಿಗೆ ಡಿಸ್‌ಪ್ಲೇ ಗಳನ್ನು ಪ್ಯಾಕ್ ಮಾಡಲಿದೆ ಎನ್ನಲಾಗ್ತಿದೆ. ಸದ್ಯ ಆನ್‌ಲೈನ್‌ ಲೀಕ್‌ ಮಾಹಿತಿ ಪ್ರಕಾರ ಒನ್‌ಪ್ಲಸ್ 8 ಲೈಟ್, ಅಥವಾ ಒನ್‌ಪ್ಲಸ್ Z 6.4 ಇಂಚಿನ ಡಿಸ್‌ಪ್ಲೇ ಹೊಂದಿರುವ ಸಾದ್ಯ ಇದೆ. ಆದರೆ ಈ ಸ್ಮಾರ್ಟ್‌ಫೋನ್‌ 'ಸ್ಟ್ಯಾಂಡರ್ಡ್' 60Hz ಇದ್ದರೆ ಆಶ್ಚರ್ಯವೇನಿಲ್ಲ ಎನ್ನಲಾಗ್ತಿದೆ. ಆದಾಗ್ಯೂ, 90Hz ಅಥವಾ 120Hz ಸಾಮರ್ಥ್ಯದ ಡಿಸ್‌ಪ್ಲೇಯನ್ನ ಬಳಸುವ ಸಾದ್ಯತೆ ಇದೆ ಎನ್ನಲಾಗಿದ್ದು, ಇದರಿಂದ ಮೆನುಗಳ ನಡುವೆ ಸ್ವೈಪ್ ಆಗಲಿ ಸ್ಕ್ರೋಲಿಂಗ್ ಮಾಡಲು ಸುಲಭವಾಗಲಿದೆ. ವಿಷಯವನ್ನು ಸುಗಮಗೊಳಿಸುತ್ತದೆ.

ಪ್ರೊಸೆಸರ್‌

ಪ್ರೊಸೆಸರ್‌

ಒನ್‌ಪ್ಲಸ್ 8 ಲೈಟ್ ಅಥವಾ ಒನ್‌ ಪ್ಲಸ್‌ Z ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ 1000 ಚಿಪ್‌ಸೆಟ್ ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದೆ. ಜೊತೆಗೆ ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ RAM ಮತ್ತು ಸ್ಟೋರೇಜ್‌ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದೋ ಇಲ್ಲವೊ ಅನ್ನೋದು ಕೂಡ ಇನ್ನು ಲಭ್ಯವಾಗಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನ ಒಳಗೊಂಡಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾ, ಅಲ್ಟ್ರಾ-ವೈಡ್ ಮತ್ತು ಟೆಲಿಫೋಟೋ ಲೆನ್ಸ್ ಹೊಂದಿದ್ದರೆ, ಇದು ವಿಭಿನ್ನ ಸನ್ನಿವೇಶಗಳಲ್ಲಿ ಫೋಟೋಗಳನ್ನು ತೆಗೆದುಕೊಳ್ಳಲು ಬಹುಮುಖತೆಯನ್ನು ನೀಡುತ್ತದೆ. ಆದಾಗ್ಯೂ, ಹೆಚ್ಚಿನ ಬಜೆಟ್ ಸ್ಮಾರ್ಟ್‌ಫೋನ್‌ಗಳು ಟೆಲಿಫೋಟೋ ಕ್ಯಾಮೆರಾವನ್ನು ಹೊಂದಿರುವುದಿಲ್ಲ, ಬದಲಿಗೆ ಮ್ಯಾಕ್ರೋ ಅಥವಾ ಡೆಪ್ತ್ ಸೆನ್ಸಿಂಗ್ ಸ್ನ್ಯಾಪರ್ ಅನ್ನು ಬೆಂಬಲಿಸುತ್ತವೆ, ಇನ್ನು ಈ ಮೂರು ಕ್ಯಾಮೆರಾಗಳು ಫೋಟೋಗ್ರಫಿಗೆ ಅದ್ಭುತವಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ Z ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗ್ತಿದೆ. ಕಡಿಮೆ ಬೆಲೆಯಲ್ಲಿ 5G ಸ್ಮಾರ್ಟ್‌ಫೋನ್‌ ಅನ್ನು ಒನ್‌ಪ್ಲಸ್‌ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಹಾಗು ಲಬ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಬ್ಯವಾಗಿಲ್ಲ.

Best Mobiles in India

English summary
While the OnePlus 8 Lite, or OnePlus Z as some of these leaks refer to it as, certainly didn’t see the volume of leaks as the other two phones in its series, we do know a bit about the device.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+