Home
ಸುದ್ದಿಜಾಲ

ಆನ್‌ಲೈನ್ ಗೇಮಿಂಗ್ ಎಂಬ ಕರಾಳ ಲೋಕಕ್ಕೆ 'ಪಬ್‌ಜಿ' ಟ್ರೆಂಡ್ ಸಾಕು!!

ಆನ್​ಲೈನ್​ ಗೇಮ್ ಪಬ್​ಜಿ ವ್ಯಸನಕ್ಕೆ ಸಿಲುಕಿದ್ದ 19 ವರ್ಷದ ವಿಧ್ಯಾರ್ಥಿಯೋರ್ವ ತನ್ನ ತಂದೆ, ತಾಯಿ ಹಾಗೂ ತಂಗಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕಿಡಾದ ಸುದ್ದಿ ನಿಮ್ಮ ಕಿವಿಗೆ ಬಿದ್ದಿರಬಹುದು. ಇಲ್ಲಿ ವ್ಯಸನ ಎಂಬುದು ಯಾವುದೇ ಆಗಿರಬಹುದು. ಅದರಲ್ಲಿ ಈ ಗೇಮಿಂಗ್ ಪ್ರಪಂಚವನ್ನು ನಾವು ಬೇರೆಯಾಗಿ ನೋಡಿದರೆ ನಮ್ಮಷ್ಟು ದಡ್ಡರು ಯಾರು ಇಲ್ಲ.

ಹೌದು, 12ನೇ ತರಗತಿಯಲ್ಲಿ ಓದುತ್ತಿದ್ದ ಸೂರಜ್ ಅಲಿಯಾಸ್ ಸರ್ನಾಮ್ ವರ್ಮಾ ಎಂಬ ವಿದ್ಯಾರ್ಥಿ ಇಂತಹ ಕೃತ್ಯವೊಂದನ್ನು ಎಸಗಿದ್ದ. ತನ್ನ ತಂದೆ ಮಿಥಿಲೇಶ್, ತಾಯಿ ಸಿಯಾ ಹಾಗೂ ತಂಗಿಯನ್ನು ಕೊಲೆ ಮಾಡಿಬಿಟ್ಟಿದ್ದ. ಇದಕ್ಕೆ ನೇರವಾಗಿ ಪಬ್‌ಜಿ ಕಾರಣ ಎಂದು ಹೇಳಲು ಆಗದಿರಬಹುದು. ಆದರೆ, ಗೇಮಿಂಗ್ ವ್ಯಸನವಂತೂ ಕಾರಣವಾಗಿರುತ್ತದೆ ಎಂಬುದುಮಾತ್ರ ಸತ್ಯ.

ಆನ್‌ಲೈನ್ ಗೇಮಿಂಗ್ ಎಂಬ ಕರಾಳ ಲೋಕಕ್ಕೆ 'ಪಬ್‌ಜಿ' ಟ್ರೆಂಡ್ ಸಾಕು!!

ಏಕೆಂದರೆ, ಎಂತಹ ಜನ, ಯಾವ ಯಾವ ಗೇಮ್‌ಗಳನ್ನು ಆಡುತ್ತಾರೆ. ಅವುಗಳು ಅವರ ಮಾನಸಿಕ ಸ್ಥಿತಿಯ ಮೇಲೆ ಬೀರುವ ಪರಿಣಾಮಗಳೇನು ಎಂಬುದನ್ನು ಕೆಲವು ಅಧ್ಯಯನ ವರದಿಗಳು ನೀಡಿರುವುದೇ ಇದಕ್ಕೆ ಉದಾಹರಣೆ. ಹಾಗಾಗಿ,ಇಂದಿನ ಲೇಖನದಲ್ಲಿ ಗೇಮಿಂಗ್ ವ್ಯಸನ ಎಂಬ ಕರಾಳ ಲೋಕಕ್ಕೆ ನಿಮ್ಮನ್ನು ತೆರೆದಿಡುವ ಪ್ರಯತ್ನ ನಮ್ಮದು. ಪಾರಾಗಬೇಕಿರುವುದು ನೀವು.!

‘ಸೆಕ್ಸ್‌’ಗಿಂತ ಜನಪ್ರಿಯ ಈ ಗೇಮ್!

‘ಸೆಕ್ಸ್‌’ಗಿಂತ ಜನಪ್ರಿಯ ಈ ಗೇಮ್!

ಆನ್‌ಲೈನಿನಲ್ಲಿ ಹೆಚ್ಚು ಮಾರಾಟವಾಗುವುದು ‘ಸೆಕ್ಸ್‌' ಎಂಬ ಜನಪ್ರಿಯ ಮಾತೊಂದಿದೆ. ಇದನ್ನು ಎಲ್ಲಾ ವಯೋಮಾನದವರು ಆನ್‌ಲೈನಿನಲ್ಲಿ ಬಯಸುವ ಕಂಟೆಂಟ್ ಅನ್ನಿಸಿಕೊಂಡಿದೆ. ಆದರೆ, 16-25ರ ನಡುವಿನ ಯುವ ಜನತೆಯ ವಿಚಾರಕ್ಕೆ ಬಂದರೆ ಅವರು ಹೆಚ್ಚು ಕಾಲ ಕಳೆಯುವುದು ಗೇಮಿಂಗ್‌ ಎಂಬ ಕೆಟಗರಿಯಲ್ಲಿ ಎಂಬುದನ್ನು ನಂಬಲು ನೀವು ತಯಾರಾಗಬೇಕಿದೆ.

ಯುಜನತೆಗೆ ಬೇಕೇ ಬೇಕು ಗೇಮ್!

ಯುಜನತೆಗೆ ಬೇಕೇ ಬೇಕು ಗೇಮ್!

ಪೋಷಕರಿಗೆ ತಮ್ಮ ಮಕ್ಕಳು ಎಲ್ಲಾ ಈ ಸೆಕ್ಸ್ ಎಂಬ ಮಾಯೆಗೆ ಸಿಲುಕುತ್ತಾರೆ ಎಂಬ ಭಯ ಯಾವಾಗಲೂ ಕಾಡುತ್ತಿರುತ್ತದೆ. ಚಿಕ್ಕವಯಸ್ಸು ಸೆಕ್ಸ್‌ಗೆ ಆಕರ್ಷಣೆ ಎಂದುಕೊಳ್ಳುತ್ತಾರೆ. ಆದರೆ, ಅಂಕಿಅಂಶಗಳು 16-25ರ ನಡುವಿನ ಯುವ ಜನತೆಯ ಆಕರ್ಷಣೆಯನ್ನು ಗೇಮಿಂಗ್ ಎಂದು ದೃಢಪಡಿಸಿವೆ. 16 ರಿಂದ 25 ನೇ ವಯಸ್ಸು ಹೆಚ್ಚು ಗೇಮಿಂಗ್ ಪ್ರಪಂಚಕ್ಕೆ ಆಕರ್ಷಿತವಾಗುತ್ತದೆ.

ವಾರದಲ್ಲಿ ಕನಿಷ್ಟ 6 ಗಂಟೆ ಗೇಮಿಂಗ್‌ನಲ್ಲಿ.

ವಾರದಲ್ಲಿ ಕನಿಷ್ಟ 6 ಗಂಟೆ ಗೇಮಿಂಗ್‌ನಲ್ಲಿ.

ಹಲವು ಅಧ್ಯಯನಗಳು ಆನ್‌ಲೈನ್‌ ಗೇಮಿಂಗ್ ಎಂಬ ಕೆಟಗರಿಯ ಕುರಿತು ಅಂಕಿ ಅಂಶಗಳನ್ನು ಮುಂದಿಟ್ಟಿವೆ. ಸುಮಾರು 1.2 ಬಿಲಿಯನ್ ಜನ ಗೇಮಿಂಗ್‌ನಲ್ಲಿ ಮುಳುಗಿ ಹೋಗಿದ್ದಾರೆ ಎಂದು ಹೇಳುತ್ತವೆ ಅಧ್ಯಯನಗಳು. ವಾರದಲ್ಲಿ ಕನಿಷ್ಟ 6 ಗಂಟೆಗಳನ್ನು ಗೇಮಿಂಗ್‌ನಲ್ಲಿಯೇ ಕಳೆಯುವ ಸಂಖ್ಯೆ ಇದಾಗಿದೆ. ಹೊಸ ಹೊಸ ಗೇಮ್‌ಗಳು ಅವರನ್ನು ಮತ್ತಷ್ಟು ಆಕರ್ಷಿಸುತ್ತಿವೆ.

ಕೋಟ್ಯಾಂತರ ಮಾರುಕಟ್ಟೆ!

ಕೋಟ್ಯಾಂತರ ಮಾರುಕಟ್ಟೆ!

1970ರಲ್ಲಿ ಆರಂಭವಾದ ಆನ್‌ಲೈನ್‌ ಗೇಮ್ ಸುತ್ತ ಕೋಟ್ಯಾಂತರ ರೂಪಾಯಿಗಳ ಮಾರುಕಟ್ಟೆಯೊಂದು ಹುಟ್ಟಿಕೊಂಡಿದೆ. ಮಹತ್ವದ ವಿಚಾರದಿಂದ ಜನರನ್ನು ದೂರ ಇಟ್ಟು, ಕೃತಕ ಪರಿಸರದಲ್ಲಿ ಅವರನ್ನು ಎಂಗೇಜ್ ಮಾಡಿ ಇಡುವ ಕೆಲಸವನ್ನು ಈ ಗೇಮ್‌ಗಳು ಮಾಡುತ್ತಿವೆ. ಹೀಗೆ ತಾವು ಹಣಗಳಿಸಿಕೊಳ್ಳಲು ಹೊಸ ಹೊಸ ಗೇಮ್‌ಗಳನ್ನು ಸೃಷ್ಟಿಮಾಡುತ್ತಾರೆ.

ಗೇಮಿಂಗ್ ಎಂಬ ಕರಾಳ ಲೋಕ!

ಗೇಮಿಂಗ್ ಎಂಬ ಕರಾಳ ಲೋಕ!

ನೇರವಾಗಿ ಇದನ್ನು ಒಂದು ಸಮಸ್ಯೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ನೀವೊಮ್ಮೆ ಗೂಗಲ್ ಮಾಡಿದರೆ ಆನ್‌ಲೈನ್‌ ಗೇಮಿಂಗ್ ಗಂಭೀರತೆ ಎಷ್ಟಿದೆ ಎಂಬುದು ಅರ್ಥವಾಗುತ್ತದೆ. ಅವು ಬೀರುತ್ತಿರುವ ಸಾಮಾಜಿಕ ಸಮಸ್ಯೆಯ ಚಿತ್ರಣ ಕಣ್ಣನ್ನು ರಾಚುತ್ತದೆ. ಜನರನ್ನು ಆಕರ್ಷಿಸುವ ಸಲುವಾಗಿಯೇ ಇಂತಹ ಹೊಸ ಹೊಸ ಗೇಮ್‌ಗಳು ಪ್ರತಿ ವರ್ಷ ಮಾರುಕಟ್ಟೆಗೆ ಬರುತ್ತಿವೆ.

ಆನ್‌ಲೈನ್‌ ಗೇಮ್ ಈಗ ಗೇಮ್ ಅಲ್ಲ!

ಆನ್‌ಲೈನ್‌ ಗೇಮ್ ಈಗ ಗೇಮ್ ಅಲ್ಲ!

ಈ ಗೇಮ್‌ಗಳು ಮನರಂಜನೆಗೆ ಸೀಮಿತವಾಗಬೇಕಿತ್ತು. ಆದರೆ, ಗೇಮ್‌ಗಳು ಈಗ ಜನರ, ಯುವಕರ ಮನಸ್ಸನ್ನು ಕದಡುತ್ತಿವೆ. ಜನರು ಕಲ್ಪನೆಯನ್ನು ತಮ್ಮ ಗೇಮ್‌ ಮೂಲಕ ಸಾಕಾರಪಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಕಲ್ಪನಾ ಲೋಕದಲ್ಲಿ ವಿಹರಿಸುತ್ತಾ ತಮ್ಮನ್ನು ತಾವು ಮರೆಯುತ್ತಿದ್ದಾರೆ. ಗೇಮ್ ಅಲ್ಲದ ಗೇಮ್ ಈಗ ಅವರನ್ನು ಬಹುದೂರ ಕರೆದೊಯ್ಯುತ್ತಿದೆ.

ಸಮಸ್ಯೆ ಬಹಳಷ್ಟಿದೆ.

ಸಮಸ್ಯೆ ಬಹಳಷ್ಟಿದೆ.

ಕೋಟ್ಯಾಂತರ ಜನ ನಿರರ್ಥಕವಾಗಿ ಸಮಯ ಕಳೆಯಲು ಗೇಮ್‌ಗಳು ಪ್ರೇರೇಪಿಸುತ್ತಿವೆ. ಹೆಚ್ಚಾಗಿ ಮಧ್ಯಮ ವರ್ಗದ ಜನ ಮಕ್ಕಳು ಗೇಮ್‌ಗಳಿಗೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳಿಗೆ ಪ್ರೀತಿಯಿಂದ ಬುದ್ದಿಹೇಳದ ಪೋಷಕರು ಅವರ ಕೈಗೆ ಕಂಪ್ಯೂಟರ್, ಮೊಬೈಲ್‌ ಕೊಟ್ಟು ಅವರನ್ನು ಹಾಳುಮಾಡುತ್ತಿದ್ದಾರೆ. ಇದಕ್ಕೆಲ್ಲಾ ಫುಲ್‌ಸ್ಟಾಪ್ ಇಡಬೇಕಿದೆ. ಆದರೆ, ಇದು ಸಾಧ್ಯವೇ.?

Best Mobiles in India

English summary
The addict may claim that he or she has "lots of friends online" yet still experience loneliness, depression, and social isolation due to the lack of in-person contact with others
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+