Home
ಸುದ್ದಿಜಾಲ

ಮಾರುಕಟ್ಟೆಗೆ ಬಂದೆ ಬಿಡ್ತು ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌! 108MP ಕ್ಯಾಮೆರಾ!

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಕ್ರೇಜ್‌ ಇದೆ. ಇದಕ್ಕೆ ತಕ್ಕಂತೆ ಒಪ್ಪೋ ಕಂಪೆನಿ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ತನ್ನ ಹೊಸ ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಜೊತೆಗೆ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ A1 ಪ್ರೊ

ಹೌದು, ಒಪ್ಪೋ ಸಂಸ್ಥೆ ಹೊಸ ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಪ್ರೊ ಮಾನಿಕರ್‌ನೊಂದಿಗೆ ಬರುವ ಮೊದಲ A-ಸರಣಿಯ ಸ್ಮಾರ್ಟ್‌ಫೋನ್ ಆಗಿದೆ. ಇದು ಕರ್ವ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, 950ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಇನ್‌ ಡಿಸ್‌ಪ್ಲೇ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಜೊತೆಗೆ 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 950ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲವನ್ನು ಹೊಂದಿದೆ. ಇದು ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಕಲರ್‌ ಒಎಸ್‌ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರೆನೊ 619 GPU ಮತ್ತು ಇಂಟಿಗ್ರೇಟೆಡ್ 5G ಮೋಡೆಮ್ ಅನ್ನು ತರುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ 8GB ವರೆಗಿನ ವರ್ಚುವಲ್ RAM ಫೀಚರ್ಸ್‌ ಅನ್ನು ಕೂಡ ಬೆಂಬಲಿಸಲಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಪಡೆದಿದೆ. ಜೊತೆಗೆ LED ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್‌ VOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ USB 2.0 ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 5G, ವೈಫೈ, ಬ್ಲೂಟೂತ್ 5.1, NFC, GPS, Glonass, Galileo ಮತ್ತು Beidou ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಆಯ್ಕೆಗೆ RMB 1799 (ಅಂದಾಜು 20,650ರೂ), ಇದರ 8GB + 256GB ಸ್ಟೋರೇಜ್‌ ಆಯ್ಕೆಗೆ RMB 1999 (ಅಂದಾಜು 22,940ರೂ) ಹಾಗೂ 12GB + 256GB ಸ್ಟೋರೇಜ್‌ ಮಾದರಿಗೆ RMB 2299 (ಅಂದಾಜು 26,380ರೂ) ಬೆಲೆಯಲ್ಲಿ ಬರಲಿದೆ. ಈ ಫೋನ್‌ ಮೂನ್ಸೀ ಬ್ಲಾಕ್, ಡಾನ್ ಗೋಲ್ಡ್ ಮತ್ತು ಬ್ಲೂ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದು ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Oppo A1 Pro With 108MP Camera Launched: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+