ಒಪ್ಪೋ A11k ಸ್ಮಾರ್ಟ್‌ಫೋನ್ ಲಾಂಚ್!..ಆರಂಭಿಕ ಬೆಲೆ 8,990ರೂ!

|

ಒಪ್ಪೋ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ಒಪ್ಪೋ A11k ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೂ 4230mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಒಪ್ಪೋ A11k

ಹೌದು, ಒಪ್ಪೋ ಕಂಪನಿಯು ಒಪ್ಪೋ ಹೊಸದಾಗಿ ಒಪ್ಪೋ A11k ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಫೋನ್ 2GB RAM ಮತ್ತು 32GB ಆಂತರಿಕ ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,990ರೂ.ಗಳಾಗಿದ್ದು, ಸಿಲ್ವರ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒಪ್ಪೋ A11k ಸ್ಮಾರ್ಟ್‌ಫೋನ್‌ 720x 1520 ಪಿಕ್ಸೆಲ್‌ ಸ್ಕ್ರಿನ್ ರೆಸಲ್ಯೂಶನ್‌ ಸಾಮರ್ಥ್ಯದ 6.2 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು, ಡಿಸ್‌ಪ್ಲೇ ಅನುಪಾತವು 19:9 ಆಗಿದೆ. ಡಿಸ್‌ಪ್ಲೇ 271ppi ಪಿಕ್ಸೆಲ್‌ ಸಾಂದ್ರತೆ ಯನ್ನ ಒಳಗೊಂಡಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು 89% ರಷ್ಟಾಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಒಪ್ಪೋ A11k ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ 2.3GHz, ಕಾರ್ಟೆಕ್ಸ್‌A53 ಒಳಗೊಂಡಿರುವ ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 2GB RAM ಮತ್ತು 32GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವೆರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸುವ ಆಯ್ಕೆ ಇದೆ.

ಡ್ಯುಯಲ್ ಕ್ಯಾಮೆರಾ

ಡ್ಯುಯಲ್ ಕ್ಯಾಮೆರಾ

ಒಪ್ಪೋ A12 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್‌, ಟಚ್‌ ಟು ಫೋಕಸ್‌ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A11k ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ದೀರ್ಘಾವಾಧಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Oppo A11k is available in a single variant of 2GB RAM and 32GB internal storage.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X