ಒಪ್ಪೊ A11s ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೊ A11s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 460 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ.

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೊ A11s ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 90Hz ರಿಪ್ರೇಶ್ ರೇಟ್ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 4GB + 128GB ಮತ್ತು 8GB + 128GB ಇಂಟರ್ ಸ್ಟೋರೇಜ್ ಅಯ್ಕೆಯನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೊ A11s ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಒಪ್ಪೋ A11s ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 460 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 10 ನಲ್ಲಿ ColorOS 7.2 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB + 128GB ಮತ್ತು 8GB + 128GB ಇಂಟರ್ ಸ್ಟೋರೇಜ್ ಅಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ಹೇಗಿದೆ?
ಒಪ್ಪೋ A11s ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A11s ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A11s ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4GB + 128GB ಸ್ಟೋರೇಜ್ ರೂಪಾಂತರಕ್ಕೆ CNY 999 (ಸುಮಾರು 11,800ರೂ).ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ 8GB + 128GB ಆಯ್ಕೆಗೆ CNY 1,199 (ಸುಮಾರು ರೂ. 14,100) ಬೆಲೆಯನ್ನು ಹೊಂದಿದೆ. ಇದನ್ನು Oppo ಚೀನಾ ಸೈಟ್‌ನಲ್ಲಿ ಡ್ರೀಮ್ ವೈಟ್ ಮತ್ತು ಮ್ಯಾಟ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಸಲು ಪಟ್ಟಿಮಾಡಲಾಗಿದೆ.

ಇದಲ್ಲದೆ ಇತ್ತೀಚಿಗೆ ಒಪ್ಪೋ ಕಂಪೆನಿ ಒಪ್ಪೋ ರೆನೊ 7 5G ಸ್ಮಾರ್ಟ್‌ಫೋನ್ ಅನ್ನು ಸಹ ಪರಿಚಯಿಸಿದೆ. ಇದು 6.43-ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, 11 ColorOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX709 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








