Home
ಸುದ್ದಿಜಾಲ

ಒಪ್ಪೋ A12 ಸ್ಮಾರ್ಟ್‌ಫೋನ್ ಲಾಂಚ್!..ಆರಂಭಿಕ ಬೆಲೆ 9,990ರೂ!

ಮೊಬೈಲ್ ಮಾರುಕಟ್ಟೆಯಲ್ಲಿ ಸೆಲ್ಫಿ ಕ್ಯಾಮೆರಾ ವಿಶೇಷತೆಯಿಂದ ಸದ್ದು ಮಾಡಿರುವ ಒಪ್ಪೋ ಸಂಸ್ಥೆಯು ಇತ್ತೀಚಿಗಷ್ಟೆ ಒಪ್ಪೋ A12 ಸ್ಮಾರ್ಟ್‌ಫೋನ್‌ ಬಹಿರಂಗ ಮಾಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದ್ದು, ಎಂಟ್ರಿ ಲೆವೆಲ್‌ ಫೋನ್‌ ಕೆಟಗೇರಿಯಲ್ಲಿ ಗುರುತಿಸಿಕೊಂಡಿದೆ. ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡ ಈ ಫೋನಿನ ಬೇಸ್‌ ವೇರಿಯಂಟ್ ಬೆಲೆಯು 9,990ರೂ. ಆಗಿದೆ.

ಒಪ್ಪೋ

ಹೌದು, ಒಪ್ಪೋ ಸಂಸ್ಥೆಯು ತನ್ನ ಹೊಸ ಒಪ್ಪೋ A12 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ P35 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಫೋನ್ 3GB RAM+32GB ಮತ್ತು 4GB RAM+64GB ಸ್ಟೋರೇಜ್‌ನ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಇದೇ ಜೂನ್ 10ರಂದು ಆನ್‌ಲೈನ್ ಹಾಗೂ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒಪ್ಪೋ A12 ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರಿನ್ ರೆಸಲ್ಯೂಶನ್‌ ಸಾಮರ್ಥ್ಯದ 6.2 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದ್ದು, ಡಿಸ್‌ಪ್ಲೇ ಅನುಪಾತವು 19:9 ಆಗಿದೆ. ಡಿಸ್‌ಪ್ಲೇ 271ppi ಪಿಕ್ಸೆಲ್‌ ಸಾಂದ್ರತೆ ಯನ್ನ ಒಳಗೊಂಡಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು 89% ರಷ್ಟಾಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಒಪ್ಪೋ A12 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ 2.3GHz, ಕಾರ್ಟೆಕ್ಸ್‌A53 ಒಳಗೊಂಡಿರುವ ಮೀಡಿಯಾ ಟೆಕ್‌ ಹಿಲಿಯೋ P35 ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 32GB, ಹಾಗೂ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವೆರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸುವ ಆಯ್ಕೆ ಇದೆ.

ಡ್ಯುಯಲ್ ಕ್ಯಾಮೆರಾ

ಡ್ಯುಯಲ್ ಕ್ಯಾಮೆರಾ

ಒಪ್ಪೋ A12 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲಾಶ್‌, ಟಚ್‌ ಟು ಫೋಕಸ್‌ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A12 ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ದೀರ್ಘಾವಾಧಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A12 ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. 3GB RAM ಮತ್ತು 32GB ಸ್ಟೋರೇಜ್ ಫೋನ್ ಬೆಲೆಯು 9,990ರೂ. ಆಗಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಬೆಲೆಯು 11,490ರೂ. ಆಗಿದೆ. ಇದೇ ಜೂನ್ 10ರಂದು ಆನ್‌ಲೈನ್ ಹಾಗೂ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ಈ ಫೋನ್ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Oppo A12 smartphone will be available across offline stores and leading e-commerce websites starting June 10.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+