ಒಪ್ಪೋ A12 ಸ್ಮಾರ್ಟ್‌ಫೋನ್‌ನ ಫೀಚರ್ಸ್ ಬಹಿರಂಗ!
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಒಪ್ಪೋ ಕಂಪೆನಿ ಹೆಸರುವಾಸಿಯಾಗಿದೆ. ಸದ್ಯ ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಅಲ್ಲದೆ ಪ್ರತಿ ಭಾರಿಯು ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವಲ್ಲಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಲು ವೇದಿಕೆ ಸಿದ್ದಪಡಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ತನ್ನ ಹೊಸ ಒಪ್ಪೋ A12 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಹೊಸ ವಿನ್ಯಾಸವನ್ನ ಹೊಂದಿರಲಿದ್ದು, ಆಕರ್ಷಕ ಫೀಚರ್ಸ್‌ಗಳನ್ನ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋಣ್‌ಗೆ ಸಂಬಂಧಪಟ್ಟಂತೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನುವುದು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಸದ್ಯ ಆನ್‌ಲೈನ್ ಲೀಕ್ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಈ ಸ್ಮಾರ್ಟ್‌ಫೋನ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ 720 x 1520 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದ 6.2 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಶೈಲಿಯನ್ನ ಹೊಂದಿದ್ದು, ಬೆಜೆಲ್ ಲೆಸ್ ಡಿಸ್‌ಪ್ಲೇ ಇದಾಗಿದೆ. ಇನ್ನು ಈ ಡಿಸ್‌ಪ್ಲೇ IPS ಎಲ್‌ಸಿಡಿ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 271ppi ಪಿಕ್ಸೆಲ್ ಸಾಂದ್ರತೆ ಯನ್ನ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಕ್ಯಾಪ್‌ಸಿಟೀವ್ ಟಚ್‌ಸ್ಕ್ರಿನ್, ಮಲ್ಟಿ ಟಚ್,ಅನ್ನು ಸಹ ಒಳಗೊಂಡಿದೆ. ವಿಡಿಯೋ ವೀಕ್ಷಣೆ ಹಾಗೂ ವಿಡಿಯೋ ಕರೆಗಳಿಗೆ ಉತ್ತಮ ಮಾದರಿಯ ಡಿಸ್‌ಪ್ಲೇಯನ್ನ ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್
ಒಪ್ಪೋ A12 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ 2.3GHz, ಕಾರ್ಟೆಕ್ಸ್A53 ಒಳಗೊಂಡಿರುವ ಮೀಡಿಯಾ ಟೆಕ್ ಹಿಲಿಯೋ P35 ಪ್ರೊಸೆಸರ್ ವೇಗವನ್ನ ಹೊಂದಿದ್ದು, ಆಂಡ್ರಾಯ್ಡ್ 9 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 32GB, ಹಾಗೂ 4GB RAM ಮತ್ತು 64GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನ ಹೊಂದಿದೆ. ಅಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವೆರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ
ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲಾಶ್, ಟಚ್ ಟು ಫೋಕಸ್, ಅನ್ನು ನೀಡಲಾಗಿದೆ. ಇದಲ್ಲದೆ ಕಂಟಿನ್ಯೂ ಶೂಟಿಂಗ್ ಮೋಡ್, ಹೈ ಡೈನಾಮಿಕ್ ರೇಂಜ್ ಮೋಡ್ ಅನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A12 ಸ್ಮಾರ್ಟ್‌ಫೋನ್ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಕಂಪೆನಿ ಇನ್ನು ಯಾವುದೇ ಖಚಿತ ಮಾಹಿತಿಯನ್ನ ನೀಡಿಲ್ಲ, ಆದರೆ
ಇದು ನೀಲಿ ಹಾಗೂ ಇತರೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.


Click it and Unblock the Notifications




