ಒಪ್ಪೋ A12s ಸ್ಮಾರ್ಟ್‌ಫೋನ್‌ ಬಿಡುಗಡೆ!..ಡಿಜಿಟಲ್ ಜೂಮ್ ಕ್ಯಾಮೆರಾ ವಿಶೇಷತೆ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ತನ್ನ ಭಿನ್ನ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಇದೀಗ ಒಪ್ಪೋ ತನ್ನ A12s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಒಪ್ಪೋ A12s ಸ್ಮಾರ್ಟ್‌ಫೋನ್‌ ಒಪ್ಪೋ ಬ್ರಾಂಡ್‌ನ ಮತ್ತೊಂದು ಎಂಟ್ರಿ ಲೆವೆಲ್‌ ಡಿವೈಸ್‌ ಆಗಿದ್ದು, ಇದು ಹೊಸ ಮಾದರಿಯ ಫೀಚರ್ಸ್‌ಗಳನ್ನ ಒಳಗೊಂಡಿದೆ. ಅಲ್ಲದೆ ಒಪ್ಪೋ A12s ಸ್ಮಾರ್ಟ್‌ಫೋನ್‌ 3GB RAM + 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ.

ಒಪ್ಪೋ

ಹೌದು,ಒಪ್ಪೋ ಕಂಪೆನಿ ತನ್ನ ಒಪ್ಪೋ A12s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.2-ಇಂಚಿನ ಎಚ್‌ಡಿ + ಡಿಸ್‌ಪ್ಲೇ ಹೊಂದಿದ್ದು,ವಾಟರ್‌ ಡ್ರಾಪ್‌ ನಾಚ್‌ ಶೈಲಿ ವಿನ್ಯಾಸವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ P35 ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಜೊತೆಗೆ ಇದು ಡ್ಯುಯೆಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ A12s ಸ್ಮಾರ್ಟ್‌ಫೋನ್‌ 720 × 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.2-ಇಂಚಿನ ಎಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ಶೈಲಿಯನ್ನ ಒಳಗೊಂಡಿದೆ. ಇನ್ನು ಈ ಫೋನ್ ಸ್ಕ್ರೀನ್-ಟು-ಬಾಡಿ ಅನುಪಾತ 89% ಅನ್ನು ಹೊಂದಿದೆ. ಜೊತೆಗೆ 19:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ P35 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 9 ಪೈ ಆವೃತ್ತಿಯ ಫೋನ್ ಕಲರ್ಓಎಸ್ 6.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೋ A12s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಈ ಡಿವೈಸ್‌ 6x ಡಿಜಿಟಲ್ ಜೂಮ್ ಮತ್ತು ಬರ್ಸ್ಟ್ ಮೋಡ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ, ಜೊತೆಗೆ ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಒಳಗೊಂಡಿದೆ. ಒಪ್ಪೋ A12s ಸ್ಮಾರ್ಟ್‌ಫೋನ್‌ ಬೆಲೆ USD 129(ಸುಮಾರು 9,700.ರೂ) ಯನ್ನು ಹೊಂದಿದೆ.

Best Mobiles in India

English summary
Oppo has launched the successor to the A12s smartphone this week. The new A12s is another entry-level device from the brand which gives you basic features.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X