Just In
Don't Miss
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- News
ವಿಶ್ವದಾದ್ಯಂತ ಕೊರೊನಾಗೆ ಬಲಿಯಾದವರ ಸಂಖ್ಯೆ 2 ಕೋಟಿ ದಾಟಿದೆ!
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Automobiles
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಪ್ಪೋ A15 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!
ಒಪ್ಪೋ ಕಂಪೆನಿಯ ಬಜೆಟ್ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ ಒಪ್ಪೋ A15 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಇಳಿಕೆ ಕಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಹೊಂದಿದೆ.

ಹೌದು, ಒಪ್ಪೋ ಕಂಪನಿಯ ಒಪ್ಪೋ A15 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 1000ರೂ. ಇಳಿಕೆ ಆಗಿದೆ. ಹೀಗಾಗಿ 2GB + 32GB ಸ್ಟೋರೇಜ್ ವೇರಿಯಂಟ್ ಮಾಡೆಲ್ ಬೆಲೆಯು ಈಗ 8,490ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ 3GB + 32GB ಸ್ಟೋರೇಜ್ ವೇರಿಯಂಟ್ ಮಾಡೆಲ್ 9,990ರೂ.ಗಳಿಗೆ ಸಿಗಲಿದೆ. ಹಾಗಾದರೇ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ
ಒಪ್ಪೋ A15 ಸ್ಮಾರ್ಟ್‌ಫೋನ್ 720x1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಕಾರ್ಯ
ಒಪ್ಪೋ A15 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM+32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ
ಒಪ್ಪೋ A15 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಒಪ್ಪೋ A15 ಕಣ್ಣಿನ ರಕ್ಷಣೆ ಮತ್ತು AI ಬ್ರೈಟ್‌ನೆಶ್‌ನೊಂದಿಗೆ ಬರಲಿದ್ದು ಅದು ಬಳಕೆದಾರರ ಆದ್ಯತೆಗಳನ್ನು ಕಾಲಕ್ರಮೇಣ ಕಲಿಯುತ್ತದೆ ಮತ್ತು ಸ್ವಯಂಚಾಲಿತವಾಗಿ ಹೊಳಪನ್ನು ಸರಿ ಹೊಂದಿಸುತ್ತದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ A15 ಸ್ಮಾರ್ಟ್‌ಫೋನ್ 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್, ಮೈಕ್ರೋ ಯುಎಸ್‌ಬಿ, ಅನ್ನು ಬೆಂಬಲಿಸಲಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190