ಭಾರತದ ಮಾರುಕಟ್ಟೆಗೆ ಲಗ್ಗೆ ಹಾಕಲು ಒಪ್ಪೋ A15 ಸ್ಮಾರ್ಟ್‌ಫೋನ್ ಸಿದ್ದತೆ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್ ಒಪ್ಪೋ A15 ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಈಗಾಗಲೇ A ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದಲ್ಲದೆ ಮಾರುಕಟ್ಟೆಯಲ್ಲಿ ಹಲವು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒಪ್ಪೋ A15 ಅನ್ನು ಬಜೆಟ್ ಶ್ರೆಣಿಯಲ್ಲಿ ಪರಿಚಯಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗಿದ್ದು,ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ಒಪ್ಪೋ ಸಂಸ್ಥೆ ತನ್ನ ಹೊಸ ಒಪ್ಪೋ A15 ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 6.52 ಇಂಚಿನ ಡಿಸ್‌ಪ್ಲೇ ಹೊಂದಿರಲಿದ್ದು, ಮೀಡಿಯಾ ಟೆಕ್ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಲ್ಲದೆ ಕಣ್ಣಿನ ರಕ್ಷಣೆ ಮತ್ತು AI ಬ್ರೈಟ್‌ನೆಶ್ ಅನ್ನು ಒಳಗೊಂಡಿದ್ದು, ಇದು ಬಳಕೆದಾರರ ಆದ್ಯತೆಗೆ ಅನುಗುಣವಾಗಿ ಬಳಸಬಹುದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೊನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ಒಪ್ಪೋ A15 ಸ್ಮಾರ್ಟ್‌ಫೋನ್ 720x1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ
ಇದು ಮೀಡಿಯಾ ಟೆಕ್ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಚಾಲನೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೇಯೇ 3GB RAM+32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಒಪ್ಪೋ ಎ 15 ಕಣ್ಣಿನ ರಕ್ಷಣೆ ಮತ್ತು ಎಐ ಬ್ರೈಟ್‌ನೆಶ್‌ನೊಂದಿಗೆ ಬರಲಿದ್ದು ಅದು ಬಳಕೆದಾರರ ಆದ್ಯತೆಗಳನ್ನು ಕಾಲಕ್ರಮೇಣ ಕಲಿಯುತ್ತದೆ ಮತ್ತು ಸ್ವಯಂಚಾಲಿತವಾಗಿ ಹೊಳಪನ್ನು ಸರಿಹೊಂದಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಇದು 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್, ಮೈಕ್ರೋ ಯುಎಸ್‌ಬಿ, ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್ ಶ್ರೇಣಿಯಲ್ಲಿ ಲಬ್ಯವಾಗಲಿದ್ದು, ಇದರ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ತಿಳಿದುಬಂದಿಲ್ಲ.


Click it and Unblock the Notifications





