ಬಜೆಟ್‌ ದರದಲ್ಲಿ ಭಾರತಕ್ಕೆ ಲಗ್ಗೆ ಇಟ್ಟ ಒಪ್ಪೋ A15 ಸ್ಮಾರ್ಟ್‌ಫೋನ್‌!

|

ಒಪ್ಪೋ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ಒಪ್ಪೋ A15 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೂ 4200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪನಿಯು ನೂತನವಾಗಿ ಒಪ್ಪೋ A15 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 3GB + 32GB ಆಂತರಿಕ ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 10,990 ರೂ.ಗಳಾಗಿದ್ದು, ಡೈನಾಮಿಕ್ ಬ್ಲ್ಯಾಕ್ ಹಾಗೂ ಮೈಸ್ಟ್ರಿ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಒಪ್ಪೋ A15 ಸ್ಮಾರ್ಟ್‌ಫೋನ್‌ 720x1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಒಪ್ಪೋ A15 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM+32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಒಪ್ಪೋ A15 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಒಪ್ಪೋ A15 ಕಣ್ಣಿನ ರಕ್ಷಣೆ ಮತ್ತು AI ಬ್ರೈಟ್‌ನೆಶ್‌ನೊಂದಿಗೆ ಬರಲಿದ್ದು ಅದು ಬಳಕೆದಾರರ ಆದ್ಯತೆಗಳನ್ನು ಕಾಲಕ್ರಮೇಣ ಕಲಿಯುತ್ತದೆ ಮತ್ತು ಸ್ವಯಂಚಾಲಿತವಾಗಿ ಹೊಳಪನ್ನು ಸರಿ ಹೊಂದಿಸುತ್ತದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒಪ್ಪೋ A15 ಸ್ಮಾರ್ಟ್‌ಫೋನ್‌ 4200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌, ಮೈಕ್ರೋ ಯುಎಸ್‌ಬಿ, ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಒಪ್ಪೋ A15 ಸ್ಮಾರ್ಟ್‌ಫೋನ್‌ 3GB + 32GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಬೆಲೆಯು 10,990ರೂ. ಆಗಿದೆ. ಡೈನಾಮಿಕ್ ಬ್ಲ್ಯಾಕ್ ಹಾಗೂ ಮೈಸ್ಟ್ರಿ ಬ್ಲೂ ಬಣ್ಣಗಳ ಆಯ್ಕೆಗಳನ್ನು ಪಡೆದಿದ್ದು, ಸದ್ಯದಲ್ಲೇ ಮಾರಾಟ ಪ್ರಾರಂಭಿಸಲಿದೆ.

Best Mobiles in India

English summary
Oppo A15 has been launched in India as the company's latest camera-focussed budget smartphone.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X