ಭಾರೀ ಬೆಲೆ ಇಳಿಕೆ!..ಅಗ್ಗದ ಬೆಲೆಯ ಒಪ್ಪೋ A15s ಫೋನ್‌ ಈಗ ಮತ್ತಷ್ಟು ಅಗ್ಗ!

|

ಒಪ್ಪೋ ಸಂಸ್ಥೆಯ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ ಒಪ್ಪೋ A15s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಕಂಡಿದೆ. ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಇದೀಗ ಬೆಲೆ ಇಳಿಕೆಯಿಂದಾಗಿ ಮತ್ತಷ್ಟು ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಆಯ್ಕೆಗಳನ್ನು

ಹೌದು, ಒಪ್ಪೋ A15s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸುಮಾರು 1,500 ರೂ. ಇಳಿಕೆ ಆಗಿದೆ. ಈ ಫೋನ್ 4GB + 64GB ಮತ್ತು 4GB + 128GB ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಎರಡು ವೇರಿಯಂಟ್‌ಗಳಲ್ಲಿಯೂ ಈಗ ಬೆಲೆ ಕಡಿತ ಆಗಿದೆ. ಬೆಲೆ ಇಳಿಕೆಯಿಂದಾಗಿ 4GB + 64GB ವೇರಿಯಂಟ್‌ ಫೋನ್ 9,990ರೂ.ಗಳಿಗೆ ಲಭ್ಯ ಹಾಗೂ 4GB + 128GB ವೇರಿಯಂಟ್‌ ಫೋನ್‌ 10,990ರೂ. ಗಳಿಗೆ ಸಿಗಲಿದೆ.

ಡೈನಾಮಿಕ್

ಇನ್ನು ಈ ಸ್ಮಾರ್ಟ್‌ಫೋನ 4,230mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಜೊತೆಗೆ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ ಡೈನಾಮಿಕ್ ಬ್ಲ್ಯಾಕ್, ಫ್ಯಾನ್ಸಿ ವೈಟ್‌ ಹಾಗೂ ರೈಂಬೋ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ

ಒಪ್ಪೋ A15s ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಒಪ್ಪೋ A15s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಸೆನ್ಸಾರ್ ಕ್ಯಾಮೆರಾ

ತ್ರಿವಳಿ ಸೆನ್ಸಾರ್ ಕ್ಯಾಮೆರಾ

ಒಪ್ಪೋ A15s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒಪ್ಪೋ A15s ಸ್ಮಾರ್ಟ್‌ಫೋನ್‌ 4,230 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಉತ್ತಮ ಚಾರ್ಜಿಂಗ್‌ ವ್ಯವಸ್ಥೆ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌, ಮೈಕ್ರೋ ಯುಎಸ್‌ಬಿ, ಅನ್ನು ಬೆಂಬಲಿಸಲಿದೆ. ಈ ಫೋನ್ 164 x 75.4 x 7.9mm ಅಳತೆ ಹೊಂದಿದ್ದು, 175 ಗ್ರಾಂ ತೂಗು ವನ್ನು ಪಡೆದಿದೆ.

ಈ ಫೋನಿನ ಬೆಲೆ ಎಷ್ಟು?

ಈ ಫೋನಿನ ಬೆಲೆ ಎಷ್ಟು?

ಒಪ್ಪೋ A15s ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇಳಿಕೆ ಆಗಿದೆ. ಈ ನಿಟ್ಟಿನಲ್ಲಿ 4GB + 64GB ವೇರಿಯಂಟ್‌ ಫೋನ್ 9,990ರೂ.ಗಳಿಗೆ ಲಭ್ಯ ಹಾಗೂ 4GB + 128GB ವೇರಿಯಂಟ್‌ ಫೋನ್‌ 10,990ರೂ. ಗಳಿಗೆ ಸಿಗಲಿದೆ. ಡೈನಾಮಿಕ್ ಬ್ಲ್ಯಾಕ್, ಫ್ಯಾನ್ಸಿ ವೈಟ್‌ ಹಾಗೂ ರೈಂಬೋ ಸಿಲ್ವರ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಇದೇ ಡಿಸೆಂಬರ್ 21ರಿಂದ ಸೇಲ್ ಶುರುವಾಗಲಿದೆ.

ಪೂರ್ಣ

ಇತ್ತೀಚೆಗೆ, ಒಪ್ಪೋ ಸಂಸ್ಥೆಯು ತನ್ನ ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ನ ಬೆಲೆಯನ್ನು ಕಡಿತಗೊಳಿಸಿದೆ. ಬೆಲೆ ಇಳಿಕೆಯಿಂದಾಗಿ ಗ್ರಾಹಕರು ಆರಂಭಿಕ ವೇರಿಯಂಟ್‌ ಅನ್ನು 36,999 ರೂ. ನಲ್ಲಿ ಖರೀದಿಸಬಹುದು. ಇನ್ನು ಈ ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ + AMOLED ಡಿಸ್ಪ್ಲೇಯೊಂದಿಗೆ 1,080 x 2,400 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಪಡೆದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಚಾಲಿತವಾಗಿದೆ.

Best Mobiles in India

English summary
Oppo A15s gets a price cut of Rs. 1,500: Check New price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X