ಅಗ್ಗದ ದರದಲ್ಲಿ ಭಾರತಕ್ಕೆ ಲಗ್ಗೆ ಇಟ್ಟ ಒಪ್ಪೋ A15s ಸ್ಮಾರ್ಟ್‌ಫೋನ್‌!

|

ಒಪ್ಪೋ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ಒಪ್ಪೋ A15s ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೂ 4200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪನಿಯು ತನ್ನ ಒಪ್ಪೋ A15s ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 4GB + 64GB ಆಂತರಿಕ ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ 4,230mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಡೈನಾಮಿಕ್ ಬ್ಲ್ಯಾಕ್, ಫ್ಯಾನ್ಸಿ ವೈಟ್‌ ಹಾಗೂ ರೈಂಬೋ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ಒಪ್ಪೋ A15s ಸ್ಮಾರ್ಟ್‌ಫೋನ್‌ 720x1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಒಪ್ಪೋ A15s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ತ್ರಿವಳಿ ಕ್ಯಾಮೆರಾ

ತ್ರಿವಳಿ ಕ್ಯಾಮೆರಾ

ಒಪ್ಪೋ A15s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒಪ್ಪೋ A15s ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಉತ್ತಮ ಚಾರ್ಜಿಂಗ್‌ ವ್ಯವಸ್ಥೆ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌, ಹಾಟ್‌ಸ್ಪಾಟ್‌, ಮೈಕ್ರೋ ಯುಎಸ್‌ಬಿ, ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಒಪ್ಪೋ A15s ಸ್ಮಾರ್ಟ್‌ಫೋನ್‌ 4GB + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಬೆಲೆಯು 11,490 ರೂ. ಆಗಿದೆ. ಡೈನಾಮಿಕ್ ಬ್ಲ್ಯಾಕ್, ಫ್ಯಾನ್ಸಿ ವೈಟ್‌ ಹಾಗೂ ರೈಂಬೋ ಸಿಲ್ವರ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಇದೇ ಡಿಸೆಂಬರ್ 21ರಿಂದ ಸೇಲ್ ಶುರುವಾಗಲಿದೆ.

Best Mobiles in India

English summary
Oppo A15s comes with a design similar to the Oppo A15, featuring a square-shaped rear camera module.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X