Home
ಸುದ್ದಿಜಾಲ

ಒಪ್ಪೋ A16K ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಮತ್ತೊಮ್ಮೆ ಭಾರೀ ಇಳಿಕೆ!

ಒಪ್ಪೋ ಸಂಸ್ಥೆಯು ಭಿನ್ನ ಶ್ರೇಣೀಯ ಬಜೆಟ್‌ ಸ್ಮಾರ್ಟ್‌ಫೋನ್‌ಗಳಿಂದ ಈಗಾಗಲೇ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಆ ಪೈಕಿ ಒಪ್ಪೋ A16K ಸ್ಮಾರ್ಟ್‌ಫೋನ್ ಸಹ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈಗಾಗಲೇ ಬೆಲೆ ಇಳಿಕೆ ಕಂಡಿರುವ ಈ ಫೋನ್ ಬೆಲೆಯಲ್ಲಿ ಇದೀಗ ಮತ್ತೊಮ್ಮೆ ಭಾರೀ ಇಳಿಕೆ ಆಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್ ಅನ್ನು ಒಳಗೊಂಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪನಿಯ ಒಪ್ಪೋ A16K ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ 1,491ರೂ. ಗಳ ರಿಯಾಯಿತಿ ಪಡೆದಿದೆ. 10,490ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಬಿಡುಗಡೆ ಆಗಿದ್ದ ಈ ಫೋನ್ ಈಗ ಬೆಲೆ ಇಳಿಕೆಯಿಂದಾಗಿ 8,999ರೂ. ಗಳಿಗೆ ಲಭ್ಯವಾಗಲಿದೆ. ಅಂದಹಾಗೇ ಈ ಫೋನ್ 3GB + 32GB ವೇರಿಯಂಟ್‌ ಮತ್ತು 4GB + 64 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ A16K ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A16K ಸ್ಮಾರ್ಟ್‌ಫೋನ್‌ 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು 269 ಪಿಕ್ಸೆಲ್‌ ಸಾಂದ್ರೆತಯನ್ನು ಒಳಗೊಂಡಿದೆ. ಜೊತೆಗೆ ಈ ಫೋನ್ 2.4D ಗೊರಿಲ್ಲಾ ಗ್ಲಾಸ್‌ ರಕ್ಷಣೆ ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಒಪ್ಪೋ A16K ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್ ಬಲ ವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ Color OS 11.1 Lite ಜೊತೆಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಸ್ಟೋರೇಜ್‌ ಸಾಮರ್ಥ್ಯ ವನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್‌ ಬೆಂಬಲದೊಂದಿಗೆ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ಸೆನ್ಸಾರ್ ವಿಶೇಷ

ಕ್ಯಾಮೆರಾ ಸೆನ್ಸಾರ್ ವಿಶೇಷ

ಒಪ್ಪೋ A16K ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, 5X ಜೂಮ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ ಇದು 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಫಿಲ್ಟರ್‌, ಬ್ಯಾಕ್‌ಲೈಟ್‌ ಹೆಚ್‌ಡಿಆರ್‌, ನೈಟ್‌ ಫಿಲ್ಟರ್‌ ಸೇರಿದಂತೆ ಇದರೊಂದಿಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಒಪ್ಪೋ A16K ಸ್ಮಾರ್ಟ್‌ಫೋನ್‌ 4,230 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಇದು 5V/ 2A ಚಾರ್ಜಿಂಗ್‌ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5, 3.5 mm ಹೆಡ್‌ಫೋನ್ ಜ್ಯಾಕ್, GPS ಮತ್ತು USB ಟೈಪ್ ಸಿ ಪೋರ್ಟ್ ಸೇರಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೂಪರ್ ಪವರ್ ಸೇವಿಂಗ್ ಮೋಡ್, ನೈಟ್ ಫಿಲ್ಟರ್‌ಗಳು ಮತ್ತು ಆಪ್ಟಿಮೈಸ್ಡ್ ನೈಟ್ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A16K ಸ್ಮಾರ್ಟ್‌ಫೋನ್‌ ಅನ್ನು ಗ್ರಾಹಕರು 8,999ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಫೋನ್‌ ಬ್ಲ್ಯಾಕ್‌, ಬ್ಲೂ ಮತ್ತು ವೈಟ್‌ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ಪ್ಲಾಟ್‌ಫಾರ್ಮ್ ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Oppo A16K receives a price cut in India: Check New price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+