ಒಪ್ಪೋ A16K ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಯಾವುದು?

|

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಒಪ್ಪೋ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಅನೇಕ ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ A16K ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹೆಲಿಯೊ G35 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,230mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A16K ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A16K ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 60Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.52-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ A16K ಸ್ಮಾರ್ಟ್‌ಫೋನ್‌ 1,600x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು 269 ಪಿಕ್ಸೆಲ್‌ ಸಾಂದ್ರೆತಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಹೇಗಿದೆ?

ಪ್ರೊಸೆಸರ್‌ ಹೇಗಿದೆ?

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಹೆಲಿಯೊ G35 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ColorOS 11.1 Lite ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್‌ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ

ಕ್ಯಾಮೆರಾ

ಒಪ್ಪೋ A16K ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ ಇದು 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A16K ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಇದು 5V/ 2A ಚಾರ್ಜಿಂಗ್‌ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್, GPS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೂಪರ್ ಪವರ್ ಸೇವಿಂಗ್ ಮೋಡ್, ನೈಟ್ ಫಿಲ್ಟರ್‌ಗಳು ಮತ್ತು ಆಪ್ಟಿಮೈಸ್ಡ್ ನೈಟ್ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಹೊಸ ಒಪ್ಪೋ A16K ಸ್ಮಾರ್ಟ್‌ಫೋನ್‌ ಏಕೈಕ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕಾಗಿ ಫಿಲಿಪೈನ್ಸ್‌ನಲ್ಲಿ PHP 6,999 (ಸುಮಾರು 10,300ರೂ) ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲಾಕ್‌ ಮತ್ತು ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಇದರ ಲಭ್ಯತೆ ಮತ್ತು ಬೆಲೆಯ ಕುರಿತು ವಿವರಗಳನ್ನು ಪ್ರಕಟಿಸಲಾಗಿಲ್ಲ.

ಒಪ್ಪೋ

ಇನ್ನು ಕೆಲ ತಿಂಗಳುಗಳ ಹಿಂದೆ ಒಪ್ಪೋ ಕಂಪೆನಿ ಭಾರತದಲ್ಲಿ ತನ್ನ ಒಪ್ಪೋ A16 ಫೋನ್‌ ಬಿಡುಗಡೆ ಮಾಡಿತ್ತು. ಇದು 6.52-ಇಂಚಿನ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಒಪ್ಪೋ A16 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ವಿದ್ಯುತ್ ಬಳಕೆಯನ್ನು ಮತ್ತಷ್ಟು ಕಡಿಮೆ ಮಾಡಲು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಮೋಡ್ ಅನ್ನು ಒಳಗೊಂಡಿದೆ.ಇದನ್ನು ಕ್ರಿಸ್ಟಲ್ ಬ್ಲ್ಯಾಕ್, ಪರ್ಲ್ ಬ್ಲೂ ಮತ್ತು ಸ್ಪೇಸ್ ಸಿಲ್ವರ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಭಾರತದಲ್ಲಿ ಏಕೈಕ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 13,990.ರೂ ಬೆಲೆ ಹೊಂದಿದೆ.

Best Mobiles in India

English summary
Oppo A16K has been launched in Philipines as the new handset under the company's A-series phones.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X