ಅಗ್ಗದ ಬೆಲೆಯಲ್ಲಿ ಭಾರತಕ್ಕೆ ಲಗ್ಗೆ ಇಟ್ಟ ಒಪ್ಪೋ A16K ಸ್ಮಾರ್ಟ್‌ಫೋನ್!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಒಪ್ಪೊ ಸಂಸ್ಥೆಯು ನೂತನವಾಗಿ ಒಪ್ಪೋ A16K ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್ ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 4,230mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.

ಹೌದು, ಒಪ್ಪೋ ಕಂಪೆನಿ ಹೊಸದಾಗಿ ಒಪ್ಪೋ A16K ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 60Hz ರಿಫ್ರೆಶ್ ರೇಟ್ ಬೆಂಬಲಿಸುವ 6.52-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದು 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಒಪ್ಪೋ A16K ಸ್ಮಾರ್ಟ್‌ಫೋನ್ 1,600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ IPS LCD ಡಿಸ್‌ಪ್ಲೇ ಆಗಿದ್ದು, 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 269 ಪಿಕ್ಸೆಲ್ ಸಾಂದ್ರೆತಯನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ ಯಾವುದು
ಒಪ್ಪೋ A16K ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ColorOS 11.1 Lite ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ಸೆನ್ಸಾರ್
ಒಪ್ಪೋ A16K ಸ್ಮಾರ್ಟ್‌ಫೋನ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಅಲ್ಲದೆ ಇದು 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ A16K ಸ್ಮಾರ್ಟ್‌ಫೋನ್ 4,230mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಇದು 5V/ 2A ಚಾರ್ಜಿಂಗ್‌ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್, GPS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೂಪರ್ ಪವರ್ ಸೇವಿಂಗ್ ಮೋಡ್, ನೈಟ್ ಫಿಲ್ಟರ್‌ಗಳು ಮತ್ತು ಆಪ್ಟಿಮೈಸ್ಡ್ ನೈಟ್ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಹೊಸ ಒಪ್ಪೋ A16K ಸ್ಮಾರ್ಟ್‌ಫೋನ್ ಏಕೈಕ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕಾಗಿ 10,490ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲಾಕ್, ವೈಟ್ ಮತ್ತು ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಇನ್ನು ಕೆಲ ತಿಂಗಳುಗಳ ಹಿಂದೆ ಒಪ್ಪೋ ಕಂಪೆನಿ ಭಾರತದಲ್ಲಿ ತನ್ನ ಒಪ್ಪೋ A16 ಫೋನ್ ಬಿಡುಗಡೆ ಮಾಡಿತ್ತು. ಇದು 6.52 ಇಂಚಿನ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಒಪ್ಪೋ A16 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








