ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!..ಸೂಪರ್ ಆಫರ್!
ಒಪ್ಪೋ ಮೊಬೈಲ್ ಕಂಪನಿಯು ಹಲವು ಜನಪ್ರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಒಂದಾದ ಒಪ್ಪೋ A17 ಮೊಬೈಲ್ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ ಆಗಿದೆ. ಆಕರ್ಷಕ ಫೀಚರ್ಸ್ಗಳೊಂದಿಗೆ ಕಾಣಿಸಿಕೊಂಡಿರುವ ಈ ಫೋನ್ ಇದೀಗ ಸಖತ್ ಬೆಲೆ ಇಳಿಕೆಯಿಂದಾಗಿ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯ.
ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣದಲ್ಲಿ ಒಪ್ಪೋ A17 ಮೊಬೈಲ್ ಬೆಲೆಯಲ್ಲಿ ಶೇ. 17% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 4GB + 64GB ವೇರಿಯಂಟ್ ಬೆಲೆಯು 14,999ರೂ. ಆಗಿದ್ದು, ಆದರೆ ಆಫರ್ನಲ್ಲಿ ಈ ಫೋನ್ ಸದ್ಯ 12,499ರೂ. ಗಳಿಗೆ ಖರೀದಿಗೆ ಲಭ್ಯವಾಗಲಿದೆ. ಹಾಗೆಯೇ ಆಯ್ದ ಬ್ಯಾಂಕ್ಗಳಿಂದ ರಿಯಾಯಿತಿ ಸಹ ದೊರೆಲಿದೆ.

ಇನ್ನು ಒಪ್ಪೋ A17 ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೇ ಒಪ್ಪೋ A17 ಸ್ಮಾರ್ಟ್ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A17 ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ : ಒಪ್ಪೋ A17 ಮೊಬೈಲ್ 6.56 ಇಂಚಿನ ಹೆಚ್ಡಿ ಪ್ಲಸ್ LCD ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಡಿಸ್ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 100% DCI-P3 ಕಲರ್ ಗ್ಯಾಮಟ್ ರೇಂಜ್ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.
ಒಪ್ಪೋ A17 ಪ್ರೊಸೆಸರ್ ಯಾವುದು ಮಾಹಿತಿ : ಒಪ್ಪೋ A17 ಮೊಬೈಲ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲವನ್ನು ಹೊಂದಿದೆ. ಇದರೊಂದಿಗೆ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.
ಒಪ್ಪೋ A17 ಕ್ಯಾಮೆರಾ ರಚನೆ ಹೇಗಿದೆ : ಒಪ್ಪೋ A17 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಹಾಗೆಯೇ ಕ್ಯಾಮೆರಾ ಫೀಚರ್ಸ್ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಆಯ್ಕೆಗಳು ಇವೆ.
ಒಪ್ಪೋ A17 ಬ್ಯಾಟರಿ ಮತ್ತು ಇತರೆ ಆಯ್ಕೆಗಳು : ಒಪ್ಪೋ A17 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್ಟೈಮ್ ಸ್ಟ್ಯಾಂಡ್ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಪಡೆದುಕೊಂಡಿದೆ.
ಒಪ್ಪೋ A17 ಮೆಮೊರಿ ಮತ್ತು ಕಲರ್ ಆಯ್ಕೆ : ಒಪ್ಪೋ A17 ಮೊಬೈಲ್ 4GB + 64GB ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








