ಒಪ್ಪೋ A17 ಫೋನ್ ಖರೀದಿಸುವ ಗ್ರಾಹಕರಿಗೆ ಇದು ಬೆಸ್ಟ್ ಆಫರ್!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಸಂಸ್ಥೆಯು ಸಹ ಒಂದಾಗಿದೆ. ಒಪ್ಪೋ ಸಂಸ್ಥೆಯ ಭಿನ್ನ ಶ್ರೇಣಿಯ ಬೆಲೆಯಲ್ಲಿ ಫೋನ್‌ಗಳನ್ನು ಪರಿಚಯಿಸಿ, ಹೆಚ್ಚಿನ ಗ್ರಾಹಕರನ್ನು ಸೆಳೆದಿವೆ. ಆ ಪೈಕಿ A ಸರಣಿಯಲ್ಲಿನ ಒಪ್ಪೋ A17 ಸ್ಮಾರ್ಟ್‌ಫೋನ್ ಸಹ ಒಂದಾಗಿದ್ದು, ಇದೀಗ ಈ ಫೋನ್ ಬೆಲೆಯಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಹೀಗಾಗಿ ಗ್ರಾಹಕರು ಈ ಫೋನಿನತ್ತ ತಿರುಗಿ ನೋಡುವಂತೆ ಆಗಿದೆ.
ಹೌದು, ಅಮೆಜಾನ್ ತಾಣದಲ್ಲಿ ಒಪ್ಪೋ A17 ಸ್ಮಾರ್ಟ್‌ಫೋನ್ 17% ರಿಯಾಯಿತಿ ಪಡೆದಿದೆ. ಈ ಫೋನ್ ಬೆಲೆ 14,999ರೂ. ಇದ್ದು, ಈಗ 12,499ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೇ ಒಪ್ಪೋ A17 ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಒಪ್ಪೋ A17 ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 100% DCI-P3 ಕಲರ್ ಗ್ಯಾಮಟ್ ರೇಂಜ್ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.
ಪ್ರೊಸೆಸರ್ ಪವರ್ ಯಾವುದು : ಒಪ್ಪೋ A17 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಹೇಗಿದೆ : ಒಪ್ಪೋ A17 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಒಪ್ಪೋ A17 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಒಳಗೊಂಡಿದೆ.
ಮೆಮೊರಿ ಹಾಗೂ ಕಲರ್ ಆಯ್ಕೆ : ಒಪ್ಪೋ A17 ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








